ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಖಾತ್ರಿ’ ಹೊಸ ಕಾಮಗಾರಿಗಳಿಗೆ ₹1 ಸಾವಿರ ಕೋಟಿ: ಕೆ.ಎಸ್.ಈಶ್ವರಪ್ಪ

ತರಬೇತಿ ಕಾರ್ಯಾಗಾರ
Last Updated 11 ಏಪ್ರಿಲ್ 2020, 11:20 IST
ಅಕ್ಷರ ಗಾತ್ರ

ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆಯಲ್ಲಿಹೊಸ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಹೆಚ್ಚುವರಿ ₹1 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಉದ್ಘಾಟಿಸಿಅವರು ಮಾತನಾಡಿದರು.

ಉದ್ಯೋಗ ಖಾತ್ರಿಬಾಕಿ ಅನುದಾನವೂ ಬಿಡುಗಡೆಯಾಗಿದೆ.ಹೊಸ ಕಾಮಗಾರಿಗಳನ್ನು ಕೈಗೊಳ್ಳಲುಅವಕಾಶ ನೀಡಲಾಗಿದೆ.ಕೊರೊನಾ ಹಿನ್ನೆಲೆಯಲ್ಲಿ ಕೂಲಿ ಮೊತ್ತವನ್ನು ₹ 249ರಿಂದ ₹ 275ಕ್ಕೆ ಹೆಚ್ಚಳ ಮಾಡಿದೆ.ಕೆಲಸ ಮಾಡಿದ ಕಾರ್ಮಿಕರ ಹಣವನ್ನು ವಾರದ ಒಳಗೆ ಪಾವತಿ ಮಾಡಲಾಗುವುದು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದರು.

5 ಜನರ ತಂಡಗಳನ್ನು ರಚಿಸಿ ಖಾತ್ರಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ನದಿ ಪುನಃಶ್ಚೇತನ ಯೋಜನೆಯಲ್ಲಿಮಳೆ ನೀರು ಹರಿದು ಪೋಲಾಗಿ ಹೋಗದಂತೆ ಕ್ರಮ ಕೈಗೊಳ್ಳಬೇಕು.ಪ್ರತಿ ಹನಿ ನೆಲದ ಒಳಗೆ ಇಂಗುವಂತಹ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಅದಕ್ಕಾಗಿ ಇಂಗು ಗುಂಡಿಗಳ ರಚನೆ, ಮಣ್ಣಿನ ಸವಕಳಿ ತಡೆಯುವುದು, ಗಿಡ ಮರ ಬೆಳೆಸಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಲ್ಲಿಗ್ರಾಮೀಣ ಪ್ರದೇಗಳಲ್ಲಿಶಾಶ್ವತ ಆಸ್ತಿ ನಿರ್ಮಾಣ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದುಸಲಹೆ ನೀಡಿದರು.

ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಮಾತನಾಡಿ, ತಾಲ್ಲೂಕಿನಲ್ಲಿ 300ಕ್ಕೂ ಹೆಚ್ಚು ಕೆರೆಗಳಿವೆ. ನದಿ ಪುನಃಶ್ಚೇತನ ಯೋಜನೆಯಡಿ ಎಲ್ಲಾ ಕೆರೆಗಳ ಹೂಳೆತ್ತಿದರೆ ರೈತರ ಬೆಳೆಗಳಿಗೆ ಸಾಕಷ್ಟು ನೀರು ಒದಗಿಸಲು ಸಾಧ್ಯ.ಏತನೀರಾವರಿ ಮೂಲಕ ತಾಲ್ಲೂಕಿನ 70 ಕೆರೆಗಳನ್ನು ತುಂಬಿಸುವ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದುವಿವರ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾ ನಿರ್ದೇಶಕ ವೀರಾಪುರ ಕಾರ್ಯಕ್ರಮ ನಿರೂಪಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಿರ್ದೇಶಕ ನಾಗರಾಜ ಗಂಗೊಳ್ಳಿ, ರವೀಂದ್ರ ದೇಸಾಯಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಎಸ್‌.ರುದ್ರೇಗೌಡ, ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯರಾದ ಸೌಮ್ಯಾಬೋಜಾನಾಯ್ಕ, ಕಾಂತೇಶ್, ಹೇಮಾ ಶಿವನಂಜಪ್ಪ, ನಾಗರಾಜ ತಮ್ಮಡಿಹಳ್ಳಿ, ತಾಲ್ಲೂಕುಪಂಚಾಯಿತಿ ಅಧ್ಯಕ್ಷೆ ಗೀತಾ ಜಯಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT