ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಗೊಂದಲ ಬಿಜೆಪಿಗೆ ಲಾಭ: ಈಶ್ವರಪ್ಪ

Last Updated 19 ಏಪ್ರಿಲ್ 2019, 15:00 IST
ಅಕ್ಷರ ಗಾತ್ರ

ಶಿವಮೊಗ್ಗ: ಮೈತ್ರಿ ಪಕ್ಷಗಳ ಗೊಂದಲ ಬಿಜೆಪಿಗೆ ವರದಾನವಾಗಿದೆ. ಕಾಂಗ್ರೆಸ್, ಜೆಡಿಎಸ್ ಮಧ್ಯೆ ಹಲವು ತೊಡಕುಗಳಿವೆ. ಹಾಗಾಗಿ, ಎಲ್ಲೆಡೆ ಬಿಜೆಪಿ ಅಭ್ಯರ್ಥಿಗಳು ಭಾರಿ ಬಹುಮತದಿಂದ ಗೆಲುವು ಪಡೆಯುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲೇ ಕನಿಷ್ಠ 50 ಸಾವಿರ ಮತಗಳ ಮುನ್ನಡೆ ಸಿಗುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ತಮಗೆ ದೊರೆತ ಮುನ್ನಡೆಯೇ ಲೋಕಸಭಾ ಚುನಾವಣೆಯಲ್ಲೂ ಪುನರಾವರ್ತನೆಯಾಗುತ್ತದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಭವಿಷ್ಯ ನುಡಿದರು.

ಭಾರತ ಮಾತ್ರ ಮೋದಿ ಮೆಚ್ಚಿಲ್ಲ. ಜಗತ್ತೇ ಮೆಚ್ಚಿದೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಹಿಂದುತ್ವದ ಅಂಶಗಳು, ರಾಷ್ಟ್ರೀಯ ವಿಚಾರಗಳೂ ಕಾರಣವಾಗುತ್ತವೆ. ಅಭಿವೃದ್ಧಿಯ ಕಾರ್ಯಗಳು ನೆರವಾಗುತ್ತವೆ. ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಕೇಂದ್ರ ಸರ್ಕಾರ ನೆರವು ನೀಡಿದೆ. ಅವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದೆ. ಈ ಎಲ್ಲ ಕಾರಣಗಳಿಂದಾಗಿ ರಾಜ್ಯದ 28 ಕ್ಷೇತ್ರಗಳಲ್ಲಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಜ್ಞಾನೇಶ್ವರ್, ವಿ.ರಾಜು, ನಾಗರಾಜ್, ಮಧುಸೂದನ್, ಹಿರಣ್ಣಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT