ಭಾನುವಾರ, ಜನವರಿ 19, 2020
28 °C

ಕಾಂಗ್ರೆಸ್, ಜೆಡಿಎಸ್‌ಗೆ ತಿರುಕನ ಕನಸು: ಈಶ್ವರಪ್ಪ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರೂ ತೇಲಿ ಬಿಡುತ್ತಿದ್ದಾರೆ. ಇವರು ಯಾರೂ ಮುಖ್ಯಮಂತ್ರಿಯಾಗುವುದಿಲ್ಲ. ಅದು ಭ್ರಮೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕುಟುಕಿದರು.

ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಉಪ ಚುನಾವಣೆಯ ಪ್ರಚಾರ ಮುಗಿದಿದೆ. ಬಿಜೆಪಿ ಎಲ್ಲ 15 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ. 8 ಸ್ಥಾನಗಳು ಗೆದ್ದರೂ ಸಾಕು ಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.

ಕಾಂಗ್ರೆಸ್ ಮುಖಂಡರೇ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಈ ಎರಡೂ ಪಕ್ಷಗಳದು ಈಗ ಮುಗಿದ ಕಥೆ. ಚುನಾವಣೆ ಫಲಿತಾಂಶದ ದಿನವೇ ಈ ಎರಡು ಪಕ್ಷಗಳ ಭವಿಷ್ಯ ನಿರ್ಧಾರವಾಗುತ್ತದೆ. ಅವರ  ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳುವುದೇ ಅನುಮಾನ ಎಂದು ಛೇಡಿಸಿದರು. 

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ತಮ್ಮ ಪಕ್ಷಕ್ಕೆ ಬರುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿ ಶಾಸಕರ ಮುಟ್ಟುವ ಧೈರ್ಯ ಅವರಿಗೆ ಇಲ್ಲ. ಮೊದಲು ಅವರ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲಿ ಎಂದು ಸವಾಲು ಹಾಕಿದರು.

ಪ್ರತಿಕ್ರಿಯಿಸಿ (+)