ಬೀದರ್: ನೂತನ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ ಅವರನ್ನು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ನಗರದಲ್ಲಿ ಸನ್ಮಾನಿಸಲಾಯಿತು.
ಸಂಘದ ಪದಾಧಿಕಾರಿಗಳು ಶಾಲು ಹೊದಿಸಿ ಗೌರವಿಸಿದರು.
ಸಂಘದ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಸಾಹೇಬ್ ಅಲಾಸ್, ಕೋಶಾಧ್ಯಕ್ಷ ಸಂಜೀವಕುಮಾರ ಸ್ವಾಮಿ,
ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಶಹಾಬುದ್ದಿನ್, ಕಾರ್ಯದರ್ಶಿ ಪ್ರಲ್ಹಾದ್, ಪದಾಧಿಕಾರಿಗಳಾದ ಬಾಬರ್, ಜಗದೇವಿ ಭೋಸ್ಲೆ, ವಿಜಯಲಕ್ಷ್ಮಿ, ನುಸರತ್ ಜಹಾನ್, ಸುಭಾಷ್ ಚೌಹಾಣ್, ಗೋವಿಂದ ಪೂಜಾರಿ, ಉಮೇಶ ಪಾಟೀಲ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.