ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

64 ವಿದ್ಯಾರ್ಥಿಗಳಿಗೆ 112 ಸ್ವರ್ಣ ಪದಕ ಪ್ರದಾನ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ
Last Updated 15 ಫೆಬ್ರುವರಿ 2019, 18:48 IST
ಅಕ್ಷರ ಗಾತ್ರ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆದ 29 ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್, ಪಿಎಚ್‌.ಡಿ ಹಾಗೂ ಪದವಿ ಪ್ರದಾನ ಮಾಡಲಾಯಿತು.

ಈ ಬಾರಿ ಒಟ್ಟು 205 ಮಂದಿಗೆ ಪಿಎಚ್‌.ಡಿ, 12,096 ವಿದ್ಯಾರ್ಥಿಗಳಿಗೆ ಪದವಿ, ದೂರ ಶಿಕ್ಷಣದ ಮೂಲಕ 15,351 ವಿದ್ಯಾರ್ಥಿಗಳಿಗೆ ಪದವಿ ನೀಡಲಾಯಿತು.

15 ಪುರುಷರು ಹಾಗೂ 49 ಮಹಿಳೆಯರು ಸೇರಿ ಒಟ್ಟು 64 ವಿದ್ಯಾರ್ಥಿಗಳು 112 ಸ್ವರ್ಣ ಪದಕ ಹಂಚಿಕೊಂಡರು. ಎಂ.ಎ. ಕನ್ನಡ ವಿಭಾಗದಲ್ಲಿ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜು ವಿದ್ಯಾರ್ಥಿನಿ ನೇತ್ರಾವತಿ 7 ಸ್ವರ್ಣ ಪದಕ ಹಾಗೂ ಒಂದು ನಗದು ಬಹುಮಾನ ಪಡೆದರು.

ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಜೋಗನ್ ಶಂಕರ್, ಕುಲಸಚಿವರಾದ ಪ್ರೊ.ಎಚ್.ಎಸ್. ಭೋಜ್ಯಾನಾಯ್ಕ, ರಾಜನಾಯಕ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್‌ ನಿರ್ದೇಶಕ ಡಾ. ಎಸ್.ಸಿ. ಶರ್ಮ ಘಟಿಕೋತ್ಸವ ಭಾಷಣ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT