ಬುಧವಾರ, ಫೆಬ್ರವರಿ 26, 2020
19 °C

ಕುವೆಂಪು ವಿವಿ: ಮೂರು ಕೇಂದ್ರಗಳ ವಿರುದ್ಧ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕೆಲವು ದೂರ ಶಿಕ್ಷಣ ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆದಿರುವ ದೂರುಗಳು ಬಂದಿವೆ. ಅಂತಹ ಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ.

ಬೆಂಗಳೂರಿನ ಸ್ಫೂರ್ತಿ ಎಜುಕೇಷನ್ ಟ್ರಸ್ಟ್, ಹುಬ್ಬಳ್ಳಿಯ ಸ್ಟೂಡೆಂಟ್ ಡೆವಲಪ್‌ಮೆಂಟ್‌ ಟ್ರಸ್ಟ್‌, ಕೆಸಿಈ ಫೌಂಡೇಷನ್ ಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ನೀಡಲಾಗುವುದಿಲ್ಲ. ಈ ಕೇಂದ್ರಗಳಿಗೆ ಪರೀಕ್ಷೆ ನಡೆಸಲು ತೆರಳಿದ್ದ  ವಿಶ್ವವಿದ್ಯಾಲಯದ ಸಿಬ್ಬಂದಿಗೆ ಮುಂದಿನ ಎರಡು ವರ್ಷ ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾಗುವುದಿಲ್ಲ. ಇಬ್ಬರು ವಿದ್ಯಾರ್ಥಿಗಳನ್ನೂ ಈಗಾಗಲೇ ಡಿಬಾರ್ ಮಾಡಲಾಗಿದೆ. ಮುಂದಿನ ಪರೀಕ್ಷೆಗಳು ಸುಮಗವಾಗಿ ನಡೆಸಲು ವಿಚಕ್ಷಣ ದಳ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು