ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನರಲ್ಲಿ ಕಾನೂನಿನ ಜ್ಞಾನ ಅವಶ್ಯ’

ಕಾನೂನು ಸಾರಕ್ಷತಾ ರಥ. ಅರಿವು–ನೆರವು ಕಾರ್ಯಕ್ರಮಕ್ಕೆ ಚಾಲನೆ
Last Updated 4 ಡಿಸೆಂಬರ್ 2018, 13:36 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಕಾನೂನು ಸಾಕ್ಷರತಾ ರಥಕ್ಕೆ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಎಂ.ಜಿ. ಉಮಾ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ‘ಈ ಸಂಚಾರಿ ವಾಹನವು ಇಂದಿನಿಂದ ಇದೇ 23ರ ವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಈ ಸಂದರ್ಭದಲ್ಲಿ ಸಂಚಾರಿ ವಾಹನದ ಜೊತೆಗೆ ನ್ಯಾಯಾಧೀಶರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವರು. ಇದನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎಸ್. ಹೊನ್ನಸ್ವಾಮಿ, ನ್ಯಾಯಾಧೀಶರಾದ ಉಮೇಶ್ ಮೂಲಿಮನಿ, ಗೋಪಾಲಕೃಷ್ಣ ರೈ, ಎಂ. ಅನಿತಾ, ಕೆ. ಶ್ರೀವಿದ್ಯಾ, ನಳಿನಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ವಿ. ದೇವರಾಜು, ಉಪಾಧ್ಯಕ್ಷ ಎ.ಡಿ. ದೊಡ್ಡಯ್ಯ, ಕಾರ್ಯದರ್ಶಿ ಎಂ.ಎನ್ ನಾಗರಾಜು, ಖಜಾಂಚಿ ಸುನೀಲ್ ಇದ್ದರು.

ಕಾರಾಗೃಹದಲ್ಲಿ ಕಾರ್ಯಕ್ರಮ: ಸಾಕ್ಷರತಾ ರಥದ ಸಂಚಾರ ಮತ್ತು ಕಾನೂನು ಅರಿವು- ನೆರವು ಕಾರ್ಯಕ್ರಮವು ಜಿಲ್ಲಾ ಕಾರಾಗೃಹದ ಆವರಣದಲ್ಲಿ ಮಂಗಳವಾರ ನಡೆಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎಸ್ ಹೊನ್ನಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ‘ಸುಪ್ರಿಂ ಕೋರ್ಟ್ ನಿರ್ದೇಶನದಂತೆ ನಾಗರಿಕರಲ್ಲಿ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗ ಪಡೆಯಬೇಕು’ ಎಂದರು.

ಜಿಲ್ಲಾ ಕಾರಾಗೃಹದ ಅಧೀಕ್ಷಕಎಸ್‌.ಎಚ್. ಜಯರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಬಂಧಿಖಾನೆ ಸಮಿತಿಯ ಸದಸ್ಯರಾದ ಜಯಮ್ಮ ಮಾತನಾಡಿದರು. ಕಾರಾಗೃಹದ ಜೈಲರ್, ಆರ್‌. ಪ್ರಸನ್ನ, ವಕೀಲರ ಸಂಘದ ಪದಾಧಿಕಾರಿಗಳು ಇದ್ದರು. ವಕೀಲ ಕೆ.ಬಿ. ಸುನೀಲ್ ಕುಮಾರ್ ಬಂಧಿಗಳ ಹಕ್ಕು ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಾಂತಿನಿಕೇತನ ಪದವಿ ಪೂರ್ವ ಕಾಲೇಜು ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT