ಶುಕ್ರವಾರ, ಫೆಬ್ರವರಿ 28, 2020
19 °C

ರೈಲಿಗೆ ಸಿಲುಕಿ ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತಾಲ್ಲೂಕಿನ ಶಂಕರ ಅರಣ್ಯ ವಲಯ ವ್ಯಾಪ್ತಿಯ ಕೊನಗವಳ್ಳಿ ರೈಲು ಹಳಿಯ ಬಳಿ ಗುರುವಾರ ಚಿರತೆಯ ಶವ ಪತ್ತೆಯಾಗಿದೆ.

ಸುಮಾರು ಆರು ವರ್ಷದ ಚಿರತೆಯ ತಲೆ ಮತ್ತು ದೇಹದ ಎಡ ಭಾಗದಲ್ಲಿ ಗಾಯಗಳಾಗಿವೆ. ಶಿವಮೊಗ್ಗ–ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಖಚಿತ ಮಾಹಿತಿ ಸಿಗಲಿದೆ ಎಂದು ವಲಯ ಅರಣ್ಯಾಧಿಕಾರಿ ಕೆ.ಸಿ.ಜಯೇಶ್, ದಿನೇಶ್ ಮಾಹಿತಿ ನೀಡಿದರು.

ಹುಲಿ ಮತ್ತು ಸಿಂಹಧಾಮದ ವನ್ಯಜೀವಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)