ಚಾಮರಾಜನಗರ: ಸಾಹಿತಿ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ (76) ಅವರು ಬುಧವಾರ ತಡರಾತ್ರಿ ನಿಧನರಾದರು.
ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಅವರ ಅಂತಿಮ ದರ್ಶನಕ್ಕೆ ಜೆಎಸ್ ಎಸ್ ವಿದ್ಯಾಪೀಠದ ಬಳಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ ಅವರ ಹುಟ್ಟೂರು ತಾಲ್ಲೂಕಿನ ಮಲೆಯೂರಿನಲ್ಲಿ ನಡೆಯಲಿದೆ.
ಸಂತಾಪ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾಗಿದ್ದ ಗುರುಸ್ವಾಮಿ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ಸೂಚಿಸಿದೆ.
'ಪರಿಷತ್ತಿನ ಮಾರ್ಗದರ್ಶಕರವಾಗಿದ್ದ ಮಲೆಯೂರು ಗುರುಸ್ವಾಮಿಯವರ ನಿಧನ ಕನ್ನಡ ಸಾಹಿತ್ಯಕ್ಕೆ ಹಾಗೂ ಚಾಮರಾಜನಗರ ಜಿಲ್ಲೆಗೆ ಅಪಾರ ನಷ್ಟ ಉಂಟುಮಾಡಿದೆ' ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶೈಲ ಕುಮಾರ್, ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.