ಮಂಗಳವಾರ, ಮಾರ್ಚ್ 31, 2020
19 °C

ಸತ್ತ ಕೋಳಿಗಳ ಸೂಕ್ತ ವಿಲೇವಾರಿ ಮಾಡದ ಫಾರಂ ಮಾಲೀಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಫಾರಂನಲ್ಲಿ ಅಧಿಕ ಸಂಖ್ಯೆಯ ಕೋಳಿಗಳು ಮೃತಪಟ್ಟರೂ ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ನಿರ್ಲಕ್ಷ್ಯ ತೋರಿದ  ಶಿಕಾರಿಪುರ ಅಂಬರಗೊಪ್ಪ ನಿವಾಸಿ ರಂಗಸ್ವಾಮಿ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.

ತಮ್ಮ ಅಡಿಕೆ ತೋಟದಲ್ಲಿರುವ ಕೋಳಿ ಫಾರಂನಲ್ಲಿ ನೂರಾರು ಕೋಳಿಗಳು ಸತ್ತು ಬಿದ್ದಿದ್ದರೂ, ಅದನ್ನು ಸರಿಯಾಗಿ ವಿಲೇವಾರಿ ಮಾಡದಿರುವುದು ಕಂಡು ಬಂದಿದೆ. ಕೋಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟರೆ ಮಾಹಿತಿ ಒದಗಿಸುವಂತೆ ಈ ಮೊದಲು ಸೂಚನೆ ನೀಡಿದ್ದರೂ, ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

 ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಜವಾಬ್ದಾರಿ ಪಾಲಿಸಲು ವಿಫಲರಾಗಿರುವ ಕಾರಣ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು