ಬುಧವಾರ, ಫೆಬ್ರವರಿ 26, 2020
19 °C

ಅಶ್ಲೀಲ ಫೋಟೊ ಅಪ್‌ಲೋಡ್ ಮಾಡುತ್ತಿದ್ದ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಕಲಿ ಫೇಸ್‌ಬುಕ್‌ ಅಕೌಂಟ್ ತೆರೆದು ಮಹಿಳೆಯೊಬ್ಬರ ಅಶ್ಲೀಲ ಫೋಟೊಗಳನ್ನ ಅಪ್‌ಲೋಡ್ ಮಾಡುತ್ತಿದ್ದ ಆರೋಪಿಯನ್ನು ಗುರುವಾರ ಶಿವಮೊಗ್ಗದ ಸೈಬರ್ ಕ್ರೈಂ ಮತ್ತು ಆರ್ಥಿಕ, ಮಾದಕ ವಸ್ತು ಅಪರಾಧ ತಡೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹರಮಘಟ್ಟದ ನಿವಾಸಿ ಉಮೇಶ (19) ಬಂಧಿತ ಆರೋಪಿ. ನಕಲಿ ಫೇಸ್ ಬುಕ್ ಖಾತೆ ತೆರೆದು ಅದರಲ್ಲಿ ಮಹಿಳೆಯ ಫೋಟೊಗಳೊಂದಿಗೆ ಅಶ್ಲೀಲ ಫೋಟೊಗಳನ್ನು ಎಡಿಟ್ ಮಾಡಿ, ಅಪ್‌ಲೋಡ್ ಮಾಡಿ ಕಿರುಕುಳ ನೀಡುತ್ತಿದ್ದ ಬಗ್ಗೆ ನೊಂದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಪಿಐ ಕೆ.ಟಿ. ಗುರುರಾಜ್ ಅವರ ನೇತೃತ್ವದಲ್ಲಿ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು