ಮಂಗಳವಾರ, ಫೆಬ್ರವರಿ 25, 2020
19 °C

ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ನಗರದ ಸೊರಬ ರಸ್ತೆಯ ಬೈಪಾಸ್ ವೃತ್ತದ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಶುಕ್ರವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿಯ ಶ್ರೀಧರ ನಗರ ಬಡಾವಣೆಯ ಅಬ್ದುಲ್ ಅಜೀಮ್ ಎಂಬಾತ ಬಂಧಿತ ಆರೋಪಿ. ಈತನಿಂದ 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಎಎಸ್‌ಪಿ ಯತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಸಾಗರ್ ಕರ್, ಶ್ರೀಧರ, ಕಾಳಾನಾಯ್ಕ, ಸಂತೋಷ್ ನಾಯ್ಕ, ವಿಶ್ವನಾಥ್, ಮಲ್ಲೇಶ್, ಗುರುಬಸವರಾಜ್, ಮಲ್ಲನಗೌಡ ಕಾರ್ಯಾಚರಣೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)