ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

148 ರಸಗೊಬ್ಬರ ಮಾರಾಟ ಲೈಸೆನ್ಸ್‌ ರದ್ದು: ಸದಾನಂದಗೌಡ

Last Updated 8 ಅಕ್ಟೋಬರ್ 2020, 14:54 IST
ಅಕ್ಷರ ಗಾತ್ರ

ಮದ್ದೂರು: ‘ಗೋದಾಮುಗಳಲ್ಲಿ ರಸಗೊಬ್ಬರದ ದಾಸ್ತಾನು ಇದ್ದರೂ ಸಂಗ್ರಹ ಇಲ್ಲ ಎಂದು ಫಲಕ ಹಾಕಿಕೊಂಡಿದ್ದ ರಾಜ್ಯದ 148 ರಸಗೊಬ್ಬರ ಮಾರಾಟ ಲೈಸೆನ್ಸ್‌ಗಳನ್ನು ರದ್ದು ಮಾಡಲಾಗಿದೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ಬಿ.ಸದಾನಂದಗೌಡ ಗುರುವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೆಲ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ರಸಗೊಬ್ಬರ ಅಂಗಡಿಗಳ ಮಾಲೀಕರು ಸೇರಿ ರಸಗೊಬ್ಬರದ ಕೃತಕ ಕೊರತೆ ಸೃಷ್ಟಿಸಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಗಮನಕ್ಕೆ ತರಲಾಗಿತ್ತು. ನಂತರ ಅಂತಹ ಗೋದಾಮು, ಅಂಗಡಿಗಳ ಮೇಲೆ ದಾಳಿ ಮಾಡಿ ಕ್ರಮ ಜರುಗಿಸಲಾಗಿದೆ. ಮುಂದೆ ರೈತರಿಗೆ ರಸಗೊಬ್ಬರದ ಕೊರತೆ ಆಗುವುದಿಲ್ಲ’ ಎಂದು ಹೇಳಿದರು.

‘ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣೆ ಸಂಬಂಧ ಬಿಜೆಪಿಯಿಂದ 2 ಅಭ್ಯರ್ಥಿಗಳ ಹೆಸರುಗಳನ್ನು ಕಳುಹಿಸಲಾಗಿದೆ. ಕೇಂದ್ರದ ನಾಯಕರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT