ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Last Updated 15 ಜೂನ್ 2022, 14:40 IST
ಅಕ್ಷರ ಗಾತ್ರ

ಮಂಡ್ಯ: ಬಾಲಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ನಗರದ ಶೀಘ್ರಗತಿಯ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ, ₹ 80 ಸಾವಿರ ದಂಡ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದೆ.

ಅಶೋಕ್‌ ಶಿಕ್ಷೆಗೆ ಒಳಗಾಗಿರುವ ಅಪರಾಧಿ. 2020, ಜುಲೈ 3ರಂದು ನಾಗಮಂಗಲ ತಾಲ್ಲೂಕಿನ ಠಾಣೆಯೊಂದರಲ್ಲಿ ಪ್ರಕರಣ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೊ ವಿಶೇಷ ನ್ಯಾಯಾಲಯ–2 ನ್ಯಾಯಾಧೀಶರಾದ ನಾಗಜ್ಯೋತಿ ತೀರ್ಪು ಪ್ರಕಟಿಸಿದರು.

ಅಪರಾಧಿ ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 4 ವರ್ಷ ಶಿಕ್ಷೆ ಅನುಭವಿಸುವಂತೆಯೂ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಬಾಲಕಿ ಪರ ಸರ್ಕಾರಿ ಅಭಿಯೋಜಕರಾದ ಶಕೀಲಾ ಅಬೂಬಕ್ಕರ್‌ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT