ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ಜಿಲ್ಲೆಯಲ್ಲಿ 23 ಕುಷ್ಠರೋಗ ಪ್ರಕರಣಗಳು ಸಕ್ರಿಯ

Published 19 ಜೂನ್ 2023, 13:58 IST
Last Updated 19 ಜೂನ್ 2023, 13:58 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ಜಿಲ್ಲೆಯಲ್ಲಿ ಇನ್ನೂ 23 ಕುಷ್ಠರೋಗ ಪ್ರಕರಣಗಳು ಸಕ್ರಿಯವಾಗಿವೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್‌.ಕೆ. ವೆಂಕಟೇಶ್‌ ತಿಳಿಸಿದರು.

ತಾಲ್ಲೂಕಿನ ದರಸಗುಪ್ಪೆ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೋಮವಾರ ಏರ್ಪಡಿಸಿದ್ದ ‘ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ 23 ಪ್ರಕರಣಗಳು ಇವೆ ಎಂದು ಪರಿಗಣಿಸಿದರೆ ಅದರ ಮೂರು ಪಟ್ಟು ಕುಷ್ಠರೋಗ ವೈರಾಣು ಸೋಂಕಿತರು ಇದ್ದಾರೆ ಎಂಬುದು ಆರೋಗ್ಯ ಇಲಾಖೆಯ ಲೆಕ್ಕಾಚಾರ. ಈ ತಾಲ್ಲೂಕಿನಲ್ಲಿ ಒಂದು ಪ್ರಕರಣ ಅಂದರೆ, ಮೂವರು ಸೋಂಕಿತರು ಇದ್ದಾರೆ ಎಂದು ಪರಿಗಣಿಸಲಾಗಿದೆ. 2025ರ ವೇಳೆಗೆ ಕುಷ್ಠರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ. ಅದಕ್ಕೆ ಎಲ್ಲರೂ ಸಹಕರಿಸಬೇಕು’ ಎಂದು ಮನವಿ ಅವರು ಮಾಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಮಾತನಾಡಿ, ‘ಕುಷ್ಠರೋಗದ ಲಕ್ಷಗಳು ಕಂಡು ಬಂದ ತಕ್ಷಣ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಕಾರ್ಯಕರ್ತರು ಜು.6ರ ವರೆಗೆ ತಾಲ್ಲೂಕಿನಾದ್ಯಂತ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ, ಚರ್ಮ ಮತ್ತು ನರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಈ ರೋಗವನ್ನು ನಿರ್ಲಕ್ಷ್ಯ ಮಾಡಬಾರದು’ ಎಂದು ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ. ಮೋಹನ್‌, ರಾಜ, ಆರೋಗ್ಯ ಸುರಕ್ಷಣಾಧಿಕಾರಿ ನೇತ್ರಾವತಿ, ಸಮುದಾಯ ಆರೋಗ್ಯಾಧಿಕಾರಿ ಪೂಜಾ ಹಿರೇಮಠ್‌, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಕೆ. ಸುವರ್ಣ, ಮುಖಂಡರಾದ ಸುರೇಂದ್ರಕುಮಾರ್‌, ಮಹೇಶ್‌, ದೇವರಾಜು, ಅಂಬರೀಶ್‌, ಮಹದೇವಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT