ಗುರುವಾರ , ಅಕ್ಟೋಬರ್ 29, 2020
28 °C

ಮಂಡ್ಯ: ಪ್ರತ್ಯೇಕ ದಾಳಿ, 3 ಕೆ.ಜಿ ಗಾಂಜಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಅಬಕಾರಿ ಇಲಾಖೆ ಅಧಿಕಾರಿಗಳು ಶುಕ್ರವಾರ ಜಿಲ್ಲೆಯ ಎರಡು ಕಡೆ ದಾಳಿ ನಡೆಸಿ 3.05 ಕೆ.ಜಿ ಗಾಂಜಾ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಹೆಮ್ಮೆಗೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಇಟ್ಟಿದ್ದ ಮನೆಗೆ ದಾಳಿ ಮಾಡಿ ವ್ಯಕ್ತಿಯೊಬ್ಬನನ್ನು ಬಂಧಿಸಿ 500 ಗ್ರಾಂ ಗಾಂಜಾ, ಒಂದು ಬೈಕ್‌ ವಶಕ್ಕೆ ಪಡೆದಿದ್ದಾರೆ. ಆತ ನೀಡಿದ ಮಾಹಿತಿ ಆಧರಿಸಿ ಮಳವಳ್ಳಿ ತಾಲ್ಲೂಕು ಹೊಸದೊಡ್ಡಿ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿ 2.5 ಕೆ.ಜಿ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಇಬ್ಬರು ಆರೋಪಿಗಳಲ್ಲಿ ಒಬ್ಬ ತಮಿಳುನಾಡು ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್‌ ಚಂದ್ರಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು