ಮದ್ದೂರು: ವರ್ಷದಲ್ಲಿ ಕೇವಲ 36 ಗಂಟೆ ಮಾತ್ರ ದರ್ಶನ ನೀಡಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಪುರಾಣ ಪ್ರಸಿದ್ಧ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಆರಂಭವಾಯಿತು.

ಈ ದೇವಸ್ಥಾನಕ್ಕೆ ದೇವಿಯನ್ನು ನಂಬಿ ಬರುವ ಭಕ್ತರ ಬೇಡಿಕೆಗಳು ಈಡೇರುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದಲೇ ತಾಲ್ಲೂಕಿನ, ಜಿಲ್ಲೆಯ ಹಾಗೂ ರಾಜ್ಯದ ವಿವಿದೆಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಅಮೃತ ಮಣ್ಣಿನ ದ್ವಾರದ ಮೂಲಕವೇ ತನ್ನ ಭಕ್ತ ವರ್ಗಕ್ಕೆ ಆಶೀರ್ವಾದ ಮಾಡುತ್ತಾಳೆ. ಭಯ, ರೋಗ, ರುಜಿನಗಳನ್ನು ನಿವಾರಿಸಿ ಸಕಲ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುತ್ತಾ ಭಕ್ತರು ಬೇಡಿದಂತೆ ಅವರ ಕೋರಿಕೆಗಳನ್ನು ದಯಪಾಲಿಸುತ್ತಾರೆ ಎಂಬ ನಂಬಿಕೆ ಭಕ್ತರಲ್ಲಿದೆ.

ತಾಲ್ಲೂಕಿನ ತೈಲೂರಮ್ಮನವರ ಹಬ್ಬದ ಬಳಿಕ ಬರುವ ಈ ಹೆಮ್ಮನಹಳ್ಳಿ ಚೌಡೇಶ್ವರಿ ಹಬ್ಬಕ್ಕೆ ತನ್ನದೇ ಆದ ಹಿರಿಮೆ ಹಾಗೂ ಹೆಸರಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಎಲ್ಲಾ ಬೀದಿಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ ಹಾಗೂ ದೇವಸ್ಥಾನದ ಗರ್ಭಗುಡಿಯನ್ನು ವಿಶೇಷ ಹೂವುಗಳಿಂದ ಅಲಂಕರಿಸಲಾಗಿದೆ. ಅಷ್ಟೇ ಅಲ್ಲದೆ ಹೊರಗಿನ ಆವರಣಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಧ್ಯಾಹ್ನ 12 ಗಂಟೆಗೆ ಅಮೃತ ಮಣ್ಣಿನ ದೇವದ್ವಾರವನ್ನು ತೆರೆಯಲಾಯಿತು. ನಂತರ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ದೇವದ್ವಾರ ತೆಗೆದ ನಂತ ಹರಕೆ ಮುಡಿ ತೆಗೆಸುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 2.30 ರಿಂದ ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ ಸಡಗರ ಸಂಭ್ರಮದಿಂದ ನಡೆಯಿತು.

ಸಂಜೆ ಬಂಡಿ ಉತ್ಸವ, ಅಮ್ಮನವರಿಗೆ ಅಭಿಷೇಕ, ಅಲಂಕಾರ ಮತ್ತು ಪೂಜಾ ವಿಧಾನ ನಡೆಯಿತು. ರಾತ್ರಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶುಕ್ರವಾರ ಬೆಳಗ್ಗೆ 4.30 ಕ್ಕೆ ಅಮ್ಮನವರ ಅಗ್ನಿಕುಂಡಪ್ರವೇಶ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅಮ್ಮನವರ ರಥೋತ್ಸವ, ಬಾಯಿಬೀಗ. ರಾತ್ರಿ 10 ಗಂಟೆಗೆ ದೇವದ್ವಾರವನ್ನು ಮುಚ್ಚುವ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ನ ಖಜಾಂಚಿ ಎಚ್. ಕೆ ರಾಜ್ ಕುಮಾರ್, ಅಧ್ಯಕ್ಷ ಎಚ್. ಕೆ ಕೃಷ್ಣ, ಗೌರವಾಧ್ಯಕ್ಷ ದೊಡ್ಡಕೆಂಪೇಗೌಡ, ಕಾರ್ಯದರ್ಶಿ ಎಚ್. ಎಸ್ ಜಯಶಂಕರ್, ಉಪಾಧ್ಯಕ್ಷ ಎಚ್.ಕೆ. ಜಯಶಂಕರ್ ಹಾಗೂ ಪದಾಧಿಕಾರಿಗಳು ಹಾಗೂ ಮುಖಂಡರು ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದಾರೆ.

ಚೌಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಳು ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಹಲವು ಕಡೆಗಳಿಂದ ಬರುತ್ತಾರೆ. ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಖಜಾಂಚಿ ಎಚ್.ಕೆ ರಾಜ್ ಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.