ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮಂಗಲ: ಭೀಕರ ಅಪಘಾತದಲ್ಲಿ ನಾಲ್ವರು ಸಾವು

Published 4 ಜೂನ್ 2023, 20:20 IST
Last Updated 4 ಜೂನ್ 2023, 20:20 IST
ಅಕ್ಷರ ಗಾತ್ರ

ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ತಿರುಮಲಾಪುರ ಗ್ರಾಮದ ಬೆಂಗಳೂರು‌–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿನ ಜಾವ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಕಡೆಯಿಂದ ಹಾಸನದ ಕಡೆಗೆ ಹೋಗುತ್ತಿದ್ದಾಗ ಬೆಳಗಿನ ಜಾವ 4.30 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯ ಹೇಮಂತ್ ಕುಮಾರ್(22), ಶಿವಮೊಗ್ಗದ ಎನ್.ಎಂ.ಧೀರಜ್ (22), ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಚಂಡೂರಪುರ ಗ್ರಾಮದ ಪಿ‌.ಯೋಗೇಶ್ ಗೌಡ(23), ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಪನಹಳ್ಳಿಯ  ಕೆ.ಶರತ್ (22) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಯುವಕರು ಗೆಳೆಯ ಶರತ್ ಜನ್ಮದಿನದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾಸನದ ಕಡೆಗೆ ಸಾಗುತ್ತಿದ್ದರು ಎಂಬ ಮಾಹಿತಿ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT