ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲಗೂರು| ಅರಣ್ಯಕ್ಕೆ ಬೆಂಕಿ: ಐವರು ಆರೋಪಿಗಳ ಬಂಧನ

Last Updated 13 ಫೆಬ್ರವರಿ 2023, 6:04 IST
ಅಕ್ಷರ ಗಾತ್ರ

ಹಲಗೂರು: ಸಮೀಪದ ಧನಗೂರು ಬಳಿಯ ಶಿಂಷಾ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ ಅರಣ್ಯ ನಾಶ ಮಾಡುತ್ತಿದ್ದ ಆರೋಪದಲ್ಲಿ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ.

ಸಮೀಪದ ಬುಯ್ಯನದೊಡ್ಡಿ ಗ್ರಾಮದ ನಂದನ್ ಕುಮಾರ್, ನವೀನ್ ಕುಮಾರ್, ಗೋವಿಂದ ಸ್ವಾಮಿ, ಬೆಂಗಳೂರು ಮೂಲದ ಆಸಿಫ್ ಖಾನ್ ಮತ್ತು ಭಾಕ್ಷು ಬಂಧಿತರು.

ಶುಕ್ರವಾರ ತಡರಾತ್ರಿ ಅರಣ್ಯಕ್ಕೆ ಬೆಂಕಿ ಆವರಿಸಿಕೊಂಡಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಬಂದಿದೆ. ತಕ್ಷಣ ಜಾಗೃತರಾದ ಅವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಸಂಪೂರ್ಣ ನಂದಿದ ನಂತರ ಇದು ಕಿಡಿಗೇಡಿಗಳ ಕೆಲಸ ಇರಬಹುದು ಎಂದು ಅನುಮಾನಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ನಿಖರ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಂದ ಎರಡು ಸ್ಕೂಟರ್, ಮೀನಿನ ಬಲೆಗಳು, ಬೆಡ್ ಶೀಟ್‌ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾವೇರಿ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ನಂದೀಶ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ನಾಗೇಂದ್ರ ಪ್ರಸಾದ್ ಅವರ ಮಾರ್ಗದರ್ಶನ ಮತ್ತು ಹಲಗೂರು ವಲಯ ಅರಣ್ಯ ಅಧಿಕಾರಿ ರವಿ ಬುರ್ಜಿ ನೇತೃತ್ವದಲ್ಲಿ ಅಪರಾಧ ಪತ್ತೆ ತಂಡ ರಚಿಸಲಾಗಿತ್ತು.

ವನಪಾಲಕರಾದ ಪ್ರಕಾಶ್, ಮಲ್ಲಿಕಾರ್ಜುನ, ಸಿದ್ದರಾಮ ಪೂಜಾರಿ, ಶ್ರೇಯಂಷ್ ಕಾರ್ಯಾಚರಣೆ ತಂಡದಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT