ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶೋತ್ಸವ ಪ್ರಯುಕ್ತ ರಕ್ತದಾನ ಮಾಡಿದ 50 ಮಂದಿ ದಾನಿಗಳು

Published 1 ಅಕ್ಟೋಬರ್ 2023, 15:55 IST
Last Updated 1 ಅಕ್ಟೋಬರ್ 2023, 15:55 IST
ಅಕ್ಷರ ಗಾತ್ರ

ಪಾಂಡವಪುರ: ಪಟ್ಟಣದ ಹಳೆಯ ಬಸ್‌ ನಿಲ್ದಾಣದಲ್ಲಿ ಸಿದ್ದಿವಿನಾಯಕ ಸೇವಾ ಸಮಿತಿಯಿಂದ ಪೂಜಿಸಿರುವ ಗಣೇಶೋತ್ಸವದ ಪ್ರಯುಕ್ತ ಫ್ರೆಂಚ್ ರಾಕ್ಸ್ ಕ್ಲಬ್ ಆಫ್ ಪಾಂಡವಪುರ ಹಾಗೂ ಜೀವಧಾರ ಟ್ರಸ್ಟ್‌ ವತಿಯಿಂದ ಭಾನುವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

ಮಂಡ್ಯ ಮಿಮ್ಸ್‌ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಪಾಂಡವಪುರ ಉಪ ವಿಭಾಗೀಯ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯರು, ಸಿಬ್ಬಂದಿ ದಾನಿಗಳಿಂದ ರಕ್ತ ಪಡೆದುಕೊಂಡರು.

ಫ್ರೆಂಚ್‌ ರಾಕ್ಸ್ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಪಿ.ರೇವಣ್ಣ ಮಾತನಾಡಿ, ‘ಸಾವು ಬದುಕಿನ ನಡುವೆ ಹೋರಾಡುವ ಹಲವು ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನ ಮಹತ್ವದ್ದಾಗಿದೆ. ಪ್ರತಿಯೊಬ್ಬರು ರಕ್ತದಾನ ಮಾಡುವುದು ಪುಣ್ಯ ಕೆಲಸವಾಗಿದೆ. ನಿರ್ದಿಷ್ಟ ಕಾಲದಲ್ಲಿ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಆರೋಗ್ಯವಂತರಾಗಿರಬಹದು. ಜೊತೆಗೆ ಬಿ.ಪಿ, ಸಕ್ಕರೆ ಕಾಯಿಲೆಯಂತಹ ಹಲವು ರೋಗಗಳನ್ನು ತಡೆಗಟ್ಟಬಹುದಾಗಿದೆ. ಹೀಗಾಗಿ ಇಂತಹ ಶಿಬಿರದಲ್ಲಿ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು’ ಎಂದು ಮನವಿ ಮಾಡಿದರು.

ಸಿದ್ದಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಫ್ರೆಂಚ್ ರಾಕ್ಸ್ ಲಯನ್ಸ್‌ ಕ್ಲಬ್ ಕಾರ್ಯದರ್ಶಿ ಮಾಣಿಕ್ಯನಹಳ್ಳಿ ಅಶೋಕ, ಖಜಾಂಚಿ ಆರ್.ದಿಲೀಪ್, ಜೀವನಧಾರ ಟ್ರಸ್ಟಿನ ನಟರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT