ಮದ್ದೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಂಹಕಾರ ಮೇರೆ ಮೀರಿದೆ. ಜನರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ’ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವಕಾಶವಾದಿ ರಾಜಕಾರಣಿ. ತಮ್ಮ ಹಿತಕ್ಕಾಗಿ ಯಾರನ್ನಾದರೂ ಓಲೈಸುತ್ತಾರೆ. ಬೇಡವಾದಾಗ ಕೈಬಿಡುತ್ತಾರೆ. ಇವರೇ ರಾಜ್ಯದ ಹೈಕಮಾಂಡ್‌ನಂತೆ ವರ್ತಿಸುತ್ತಿದ್ದಾರೆ’ ಎಂದು ಕಿಡಿ ಕಾರಿದರು.

‘ರಾಜ್ಯದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ ಹಾಗೂ ಕಾಂಗ್ರೆಸ್ ಸಾಧನಾ ಸಮಾವೇಶಗಳ ಗಿಮಿಕ್ ಕಂಡು ಜನರು ಬೇಸರಗೊಂಡಿದ್ದಾರೆ. ಹೀಗಾಗಿ ಜನರು ಪರ್ಯಾಯವಾಗಿ ಜೆಡಿಎಸ್ ಅನ್ನು ಆರಿಸಲಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಂಗಳೂರು ಸೇರಿದಂತೆ ರಾಜ್ಯದಲ್ಲಿ ಹಿಂದೂ ಹಾಗೂ ಮುಸ್ಲಿಮರ ಹತ್ಯೆಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಎರಡೂ ಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು. ಜೆಡಿಎಸ್ ಮುಖಂಡರಾದ ಚನ್ನಪ್ಪ, ಶ್ರೀನಿವಾಸ್, ಶಿವರಾಮು, ಸೋಮಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.