ಮಂಡ್ಯ: ಸಿನಿಮಾ ನಟರು, ಶಿಕ್ಷಕರು, ಬಣ್ಣ ಬಣ್ಣದ ಹೂಗಳು, ಪ್ರಕೃತಿ, ಪ್ರಾಣಿ ಮತ್ತು ಪಕ್ಷಿಗಳು, ತರಕಾರಿ, ಗೊಂಬೆಗಳ ಚಿತ್ರ ಸೇರಿದಂತೆ ವಿವಿಧ ಮಾದರಿಯ ಒಟ್ಟು 750 ತರಹೇವಾರಿ ವರ್ಣಚಿತ್ರಗಳನ್ನು 150 ವಿದ್ಯಾರ್ಥಿಗಳು ಬಿಡಿಸುವ ಮೂಲಕ ನೋಡುಗರ ಗಮನ ಸೆಳೆದರು.

ನಗರದ ಕಾರ್ಮೆಲ್ ಕಾನ್ವೆಂಟ್ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ‘ಕಾರ್ಮೆಲ್ ವರ್ಣಚಿತ್ರ’ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ ವೈಶಿಷ್ಟ್ಯಪೂರ್ಣವಾಗಿತ್ತು.

ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ‘ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಪಡೆಯುವ ಕಡೆ ಗಮನ ಹರಿಸುವಂತೆ ನೋಡಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಲು ಸಹಕರಿಸಬೇಕು’ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವು ಹೆಚ್ಚಲು ಶಾಲೆಗಳು ಪಠ್ಯೇತರ ಚಟುವಟಿಕಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಇದರಿಂದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚುತ್ತದೆ. ಅವರ ಕಲಿಕಾ ಸಾಮರ್ಥ್ಯವು ಪರಿಣಾಮಕಾರಿಯಾಗಿರುತ್ತದೆ. ಯಾವುದೇ ಮಕ್ಕಳಿಗೆ ಪೋಷಕರು ಅಂಕ ಗಳಿಸುವಂತೆ ಒತ್ತಡ ಹೇರದೆ, ಆಸಕ್ತಿ ಇರುವ ವಿಷಯದಲ್ಲಿಯೇ ಮುಂದುವರಿಯಂತೆ ನೋಡುಕೊಳ್ಳುವುದು ಮುಖ್ಯವಾಗಬೇಕು ಎಂದರು.

ಶಿಕ್ಷಣಾಧಿಕಾರಿ ಬಿ.ಟಿ. ಚಂದ್ರಕಾಂತ ಮಾತನಾಡಿ, ಚಿತ್ರಕಲೆಯಲ್ಲಿ ಮಕ್ಕಳು ಭಾಗವಹಿಸುವುದರಿಂದ ಬರವಣಿಗೆಯ ಗುಣಮಟ್ಟ ಹೆಚ್ಚುತ್ತದೆ ಮತ್ತು ಏಕಾಗ್ರತೆ ಬರುತ್ತದೆ. ಪ್ರಮುಖ ಸ್ಥಳಗಳು, ಮಹನೀಯರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿನ ಚಿತ್ರಣಗಳನ್ನು ಮಕ್ಕಳಿಗೆ ಪರಿಚಯಿಸುವುದೇ ಈ ಚಿತ್ರಕಲೆಯಾಗಿದೆ, ಹಾಗಾಗಿ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಚಿತ್ರಕಲೆ ಶಿಕ್ಷಕ ಪ್ರಶಾಂತ್ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಉಮೇಶ್, ಶಿಕ್ಷಣ ಸಂಯೋಜನಾಧಿಕಾರಿ ಸ್ವಾಮಿ, ಮುಖ್ಯಶಿಕ್ಷಕಿ ಸಿಸ್ಟರ್ ಮೇರಿ ಫೌಲಿನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.