ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರವೀಂದ್ರ ಶ್ರೀಕಂಠಯ್ಯ ಅವರು 3 ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಕೆ.ಉದಯ್ ಕುಮಾರ್ 1 ನಾಮಪತ್ರ ಸಲ್ಲಿಸಿದರು. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸುರೇಶ್ಗೌಡ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿ ಡಿ.ಆರ್.ಮಂಜುನಾಥ್ 3 ನಾಮಪತ್ರ ಸಲ್ಲಿಸಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಕೆ.ರವಿಕುಮಾರ್ 1 ನಾಮಪತ್ರ ಸಲ್ಲಿಸಿದರು.