ಶನಿವಾರ, ಡಿಸೆಂಬರ್ 4, 2021
20 °C

ಮಂಡ್ಯ: ಕೋವಿಡ್‌ನಿಂದ ಮಹಿಳೆ ಸಾವು, 91 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ವರ್ಷದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.

ಮದ್ದೂರು ತಾಲ್ಲೂಕಿನ ಆ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಕೋವಿಡ್ ಕಾರ್ಯಸೂಚಿ ಅನ್ವಯ ಮಂಗಳವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಜಿಲ್ಲೆಯಲ್ಲಿ ಮಂಗಳವಾರ 91 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದ್ದರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,861ಕ್ಕೆ ಏರಿಕೆಯಾಗಿದೆ. ಕೆ.ಆರ್‌.ಪೇಟೆ ತಾಲ್ಲೂಕಿನ 29 ಮಂದಿ, ಮಂಡ್ಯ 23, ಮಳವಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ ತಲಾ 9, ನಾಗಮಂಗಲ ತಾಲ್ಲೂಕಿನ 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್‌ನಿಂದ ಗುಣಮುಖರಾದ 166 ಮಂದಿಯನ್ನು ವಿವಿಧ ಕೋವಿಡ್‌ ಕೇಂದ್ರಗಳಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 139 ಮಂದಿ, ಶ್ರೀರಂಗಪಟ್ಟಣ 7, ಮದ್ದೂರು, ಪಾಂಡವಪುರ ತಲಾ 6, ಮಳವಳ್ಳಿ, ಕೆ.ಆರ್‌.ಪೇಟೆ ತಲಾ 3, ನಾಗಮಂಗಲ ತಾಲ್ಲೂಕಿನ ಇಬ್ಬರನ್ನು ಬಿಡುಗಡೆ ಮಾಡಲಾಯಿತು. ಒಟ್ಟು ಸೋಂಕಿತರಲ್ಲಿ ಇಲ್ಲಿಯವರೆಗೆ 4,655 ಮಂದಿ ಗುಣಮುಖರಾಗಿದ್ದಾರೆ. 2,133 ಪ್ರಕರಣಗಳು ಸಕ್ರಿಯವಾಗಿವೆ.

ಜಿಲ್ಲಾಧಿಕಾರಿ ಭೇಟಿ: ನಗರದ ಹೊರವಲಯದಲ್ಲಿರುವ ಒಕ್ಕಲಿಗರ ಸಂಘದ ವಿದ್ಯಾರ್ಥಿ ನಿಲಯದ ಕೋವಿಡ್ ಕೇರ್‌ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೊಡನೆ ನೇರವಾಗಿ ಸಂವಾದ ನಡೆಸಿ ಮೂಲ ಸೌಕರ್ಯ, ಊಟೋಪಾಚರಗಳ ಬಗ್ಗೆ ವಿಚಾರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು