ಬುಧವಾರ, ಜೂನ್ 29, 2022
25 °C
ಕೆ.ಆರ್.ಪೇಟೆ ಪಟ್ಟಣದಲ್ಲಿ ಪ್ರಸನ್ನ ಗೌಡ ಮತಯಾಚನೆ

ಭ್ರಷ್ಟ ವ್ಯವಸ್ಥೆಗೆ ಬೇಸತ್ತ ಮತದಾರ: ಪ್ರಸನ್ನ ಗೌಡ ಮತಯಾಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪೇಟೆ: ವಿಧಾನ ಪರಿಷತ್‌ ಪದವೀಧರರ ಕ್ಷೇತ್ರದ ರಾಜ್ಯ ರೈತ ಸಂಘದ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಪಟ್ಟಣದಲ್ಲಿ ಮತಯಾಚನೆ ಮಾಡಿದರು.

‘ಚುನಾವಣೆಯ ಹಿನ್ನೆಲೆಯಲ್ಲಿ 85 ಸಾವಿರ ಮತದಾರರ ನೋಂದಣಿ ಮಾಡಿಸಿದ್ದೇನೆ. ಅನೇಕರು ಸದ್ಯದ ರಾಜಕೀಯ ವ್ಯವಸ್ಥೆ ಸರಿಯಾಗಬೇಕು ಎನ್ನುವ ಭಾವನೆ ಹೊಂದಿದ್ದಾರೆ. ಹಣ ಬಲದ ರಾಜಕಾರಣ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಿದ್ದಾರೆ. ಇದನ್ನು ಬದಲಿಸಲು ಪ್ರತಿಯೊಬ್ಬ ಮತದಾರ ಪಣತೊಡಬೇಕು. ಪದವೀಧರರ ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಲು ಸಿದ್ಧನಿದ್ದೇನೆ. ನನಗೆ ಮೊದಲ ಪ್ರಾಸಶ್ತ್ಯದ ಮತ ನೀಡಬೇಕು’ ಎಂದು ಹೇಳಿದರು.

‘ದೇಶದಲ್ಲಿ ಬಂಡವಾಳಶಾಹಿಗಳು ವಿಜೃಂಭಿಸುತ್ತಿದ್ದಾರೆ. ನಿರುದ್ಯೋಗಿಗಳು, ರೈತರು, ಕಾರ್ಮಿಕರು, ಅಸಂಘಟಿತ ವಲಯದವರು ಕಡೆಗಣಿಸಲ್ಪಟ್ಟಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ, ತಾಲ್ಲೂಕು ರೈತ ಮುಖಂಡರಾದ ಎಲ್.ಬಿ.ಜಗದೀಶ್, ಮುದ್ದುಕುಮಾರ್, ನಾಗೇಗೌಡ, ನಾಗರಾಜು, ಕೃಷ್ಣೇಗೌಡ, ಕರೋಟಿ ತಮ್ಮಯ್ಯ, ನಾರಾಯಣ ಸ್ವಾಮಿ, ಕೇಶವಮೂರ್ತಿ, ಬಸವರಾಜು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು