ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಗೃಹಿಣಿ ಆತ್ಮಹತ್ಯೆ: ಧರ್ಮಸ್ಥಳ ಸಂಘದ ಕಿರುಕುಳ –ಆರೋಪ

Published : 18 ಸೆಪ್ಟೆಂಬರ್ 2024, 15:53 IST
Last Updated : 18 ಸೆಪ್ಟೆಂಬರ್ 2024, 15:53 IST
ಫಾಲೋ ಮಾಡಿ
Comments

ಮಳವಳ್ಳಿ (ಮಂಡ್ಯ): ತಾಲ್ಲೂಕಿನ ಮಲಿಯೂರಿನ ಗೃಹಿಣಿ ಮಹಾಲಕ್ಷ್ಮಿ (35) ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ‘ಸಾಲದ ಕಂತಿನ ಹಣ ತುಂಬುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣ’ ಎಂದು ಅವರ ಪತಿ ಮಲ್ಲು ಕಿರುಗಾವಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

‘ಪತ್ನಿಯು ಐದು ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ ₹2 ಲಕ್ಷ ಸಾಲ ಪಡೆದಿದ್ದರು. ಪ್ರತಿ ಬುಧವಾರ ₹1,700 ಕಂತು ತುಂಬಬೇಕಿತ್ತು. ಸಂಸ್ಥೆಯ ಪ್ರತಿನಿಧಿಯೊಬ್ಬರು ಮನೆಯ ಬಳಿ ಬಂದು ಕೂಡಲೇ ಕಂತಿನ ಹಣ ನೀಡುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅದರಿಂದ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡರು’ ಎಂದು ಆರೋಪಿಸಿದ್ದಾರೆ.

ತಾಲ್ಲೂಕಿನ ಹಾಡ್ಲಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ‘ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧಿಕ ಬಡ್ಡಿ ಪಡೆಯುತ್ತಿದೆ. ಜನ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು’ ಎಂದು ಕರೆ ನೀಡಿದ್ದರು. ಆರೋಪದ ಬೆನ್ನಲ್ಲೇ ಆತ್ಮಹತ್ಯೆ ‌ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT