ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಸೇರಿದ ಎಎಪಿ ಮುಖಂಡ ಸಿ.ಎಸ್‌. ವೆಂಕಟೇಶ್‌

Published 14 ಏಪ್ರಿಲ್ 2024, 16:00 IST
Last Updated 14 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಎಎಪಿ ಅಭ್ಯರ್ಥಿಯಾಗಿ ಎರಡು ಬಾರಿ ಸ್ಪರ್ಧಿಸಿದ್ದ, ಎಎಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹಾಗೂ ವಕೀಲ ಸಿ.ಎಸ್‌. ವೆಂಕಟೇಶ್‌ ಶನಿವಾರ ಕಾಂಗ್ರೆಸ್‌ ಸೇರಿದರು.

ತಾಲ್ಲೂಕಿನ ಚಂದಗಾಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಾಸಕ ರಮೇಶ ಬಂಡಿಸಿದ್ದೇಗೌಡ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ವೆಂಕಟೇಶ್‌ ಅವರ ಜತೆಗೆ ಎಎಪಿ ಕಾರ್ಯಕರ್ತರರಾದ ಚಿಕ್ಕತಮ್ಮೇಗೌಡ, ಮೇಳಾಪುರ ಶ್ರೀನಿವಾಸ್‌, ಸದಾನಂದ, ಪುಟ್ಟರಾಜು, ಶಿವಕುಮಾರ್‌, ಹೆಬ್ಬಾಡಿಹುಂಡಿ ಸಿದ್ದರಾಮೇಗೌಡ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್‌ ಸೇರಿದರು.

'ಸಮಾಜವನ್ನು ಒಡೆಯುತ್ತಿರುವ ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕಾದ ಅಗತ್ಯವಿದೆ. ಹಾಗಾಗಿ ಬೇಷರತ್ತಾಗಿ ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂದು ವೆಂಕಟೇಶ್‌ ತಿಳಿಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ಕಾಂಗ್ರೆಸ್‌ ಪಕ್ಷದ ತತ್ವ, ಸಿದ್ದಾಂತದ ಮೇಲೆ ನಂಬಿಕೆ ಇಟ್ಟು ವರುವ ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಪ್ರಕಾಶ್‌, ಎಂಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಎನ್‌. ವಿ. ಚಲುವರಾಜು, ಪುರಸಭೆ ಸದಸ್ಯ ಎಂ.ಎಲ್‌. ದಿನೇಶ್‌, ಮುಖಂಡರಾದ ಸುಬ್ಬಣ್ಣ, ರಾಮಣ್ಣ, ಚಂದ್ರಶೇಖರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT