ಬುಧವಾರ, ಡಿಸೆಂಬರ್ 8, 2021
28 °C

ಮಂಡ್ಯ: ಅಭಿಷೇಕ್‌ಗೌಡ 278 ರ‍್ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಮಳವಳ್ಳಿ ತಾಲ್ಲೂಕು ಮಾರಗೌಡನಹಳ್ಳಿ ಗ್ರಾಮದ ಅಭಿಷೇಕ್‌ಗೌಡ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 278ನೇ ರ‍್ಯಾಂಕ್‌ ಪಡೆದಿದ್ದಾರೆ.

ಎಂಬಿಬಿಎಸ್‌ ಪದವೀಧರನಾಗಿರುವ ಅಭಿಷೇಕ್‌ 3ನೇ ಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಇನ್‌ಸೈಟ್‌ ಸಂಸ್ಥೆಯಲ್ಲಿ ಅವರು 6 ತಿಂಗಳು ತರಬೇತಿ ಪಡೆದಿದ್ದರು. ನಂತರ ಸ್ವಯಂಪ್ರೇರಿತವಾಗಿ ಪರೀಕ್ಷೆಗೆ ಸಿದ್ಧವಾಗಿದ್ದರು. ಎಸ್‌ಎಸ್‌ಎಲ್‌ ಸಿ (ಶೇ 96), ದ್ವಿತೀಯ ಪಿಯುಸಿ (ಶೇ 96) ಪರೀಕ್ಷೆಯಲ್ಲೂ ಅವರು ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದರು.

10ನೇ ತರಗತಿವರೆಗೂ ಮಾರಗೌಡನಹಳ್ಳಿಯಲ್ಲಿ ಕನ್ನಡ ಮಾಧ್ಯಮದಲ್ಲೇ ಕಲಿತು ಪಿಯುಸಿಯನ್ನು ಮಂಡ್ಯ ತಾಲ್ಲೂಕಿನ ಕೊಮ್ಮೇರಹಳ್ಳಿ ಬಿಜಿಎಸ್‌ ಸಂಸ್ಥೆಯಲ್ಲಿ ಓದಿದ್ದರು. ಹೊಸಕೋಟೆಯ ಎಂವಿಜೆ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್‌ ಪದವಿ ಪೂರೈಸಿದ್ದರು.

‘ಪ್ರೌಢಶಾಲೆ ಹಂತದಲ್ಲೇ ಯುಪಿಎಸ್‌ಸಿ ಪರೀಕ್ಷೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದೆ. ಎಂಬಿಬಿಎಸ್‌ ಮುಗಿಯುತ್ತಿದ್ದಂತೆ ಎರಡೂವರೆ ವರ್ಷಗಳ ಕಾಲ ಪರೀಕ್ಷೆಗಾಗಿ ಸತತ ಪ್ರಯತ್ನ ನಡೆಸಿದೆ. ವಿಶ್ವಾಸದ ಓದಿಗೆ ಫಲ ಸಿಕ್ಕಿದೆ. ಸಂದರ್ಶನಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರ ಮಾರ್ಗದರ್ಶನ ಪಡೆದೆ’ ಎಂದು ಅಭಿಷೇಕ್‌ ಗೌಡ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು