ಮಂಗಳವಾರ, ಏಪ್ರಿಲ್ 13, 2021
25 °C

ಎಸಿಬಿ ಬಲೆಗೆ ಭೂ ದಾಖಲೆ ಇಲಾಖೆ ಅಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಭೂದಾಖಲೆಗಳ ಇಲಾಖೆ ಪ್ರಭಾರ ಉಪ ನಿರ್ದೇಶಕಿ ವಿಜಯಾ ಅವರು ವ್ಯಕ್ತಿಯೊಬ್ಬರಿಂದ ₹ 25 ಸಾವಿರ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಬಂಧಿಸಿದ್ದಾರೆ.

ಇಲಾಖೆಯಲ್ಲಿ ಗುತ್ತಿಗೆ ಸರ್ವೇಯರ್‌ ಆಗಿ ಕೆಲಸ ಮಾಡುತ್ತಿದ್ದ ಮಹದೇವಸ್ವಾಮಿ ಎಂಬುವವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಭೂದಾಖಲೆಗಳ ಇಲಾಖೆಯಲ್ಲಿ ಹೊರಗುತ್ತಿಗೆ ಸರ್ವೇಯರ್‌ಗಳ ಗುತ್ತಿಗೆ ಅವಧಿ ಮುಂದುವರಿಸುವುದಕ್ಕಾಗಿ ಪ್ರತಿ ಅಭ್ಯರ್ಥಿಯಿಂದ ವಿಜಯಾ ₹ 30 ಸಾವಿರ ಬೇಡಿಕೆ ಇಟ್ಟಿದ್ದರು.

ಸೋಮವಾರ ಅವರು ₹ 25 ಸಾವಿರ ಲಂಚ ಸ್ವೀಕರಿಸುವ ಸಮಯದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಲಂಚದ ಹಣವನ್ನು ವಶಕ್ಕೆ ಪಡೆದು ಪೊಲೀಸರು ಅಧಿಕಾರಿಯನ್ನು ಬಂಧಿಸಿದರು. ನಗರದ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು