ಮಂಗಳವಾರ, ಜನವರಿ 28, 2020
24 °C

ಭಾರತೀನಗರ ಬಳಿ ಉರುಳಿದ ಬಸ್‌: 20 ರೈತರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾರತೀನಗರ: ಸಮೀಪದ ಮಡೇನಹಳ್ಳಿ ಗೇಟ್‌ ಬಳಿ ರೇಷ್ಮೆ ಇಲಾಖೆ ವತಿಯಿಂದ ರೇಷ್ಮೆ ಬೆಳೆಗಾರರ ಅಧ್ಯಯನ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 20 ರೈತರು ಗಾಯಗೊಂಡಿದ್ದಾರೆ.

ಶ್ರೀರಂಗಪಟ್ಟಣದ ಹರ್ಷಿತ್, ಗೋಪಾಲ್, ನಾಗೇಂದ್ರ, ಜಯರಾಮು, ಚಿಕ್ಕಹಾರೋಹಳ್ಳಿ ಗ್ರಾಮದ ಪ್ರಕಾಶ್, ನವೀನ್, ಶಿವರಾಜು, ನೇರಳಕೆರೆ ಮಂಜ, ಪುಟ್ಟಸ್ವಾಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಗ್ರಾಮಗಳ 52 ರೈತರು, ರೇಷ್ಮೆ ವಿಸ್ತರಣಾಧಿಕಾರಿ ಜಯರಾಮ ಅವರ ನೇತೃತ್ವದಲ್ಲಿ ಖಾಸಗಿ ಬಸ್‌ನಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಕೋಲಾರ ಜಿಲ್ಲೆಗೆ ತೆರಳುತ್ತಿದ್ದರು. ರಸ್ತೆ ಪಕ್ಕ ಇದ್ದ ಗುಂಡಿಗೆ ಉರುಳಿ ಬಿದ್ದಿದೆ. ರಸ್ತೆ ಬದಿಯಲ್ಲೇ ಇದ್ದ ವಿದ್ಯುತ್‌ ಕಂಬಕ್ಕೂ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)