ಶನಿವಾರ ರಾತ್ರಿ ರಸ್ತೆ ಬದಿಯಲ್ಲಿ ನಿಂತಿದ್ದ ಬಸವೇಗೌಡರಿಗೆ ತಳಗವಾದಿ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ತಳಗವಾದಿ ವಿಜಯ್ ಸಹ ಗಾಯಗೊಂಡಿದ್ದು, ಗಾಯಾಳುಗಳನ್ನು ವಾಹನದಲ್ಲಿ ಸಾಗಿಸಲು ಸಹಾಯ ಮಾಡುತ್ತಿದ್ದ ದೇವಿಪುರದ ಚೌಡಯ್ಯ ಅವರಿಗೆ ಕೆ.ಎಂ. ದೊಡ್ಡಿ ಕಡೆಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನಾಗರಾಜು, ಚೌಡಯ್ಯ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.