ಹಲಗೂರು: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಶುಕ್ರವಾರ ರಾತ್ರಿ ಹಲಗೂರು ಸಮೀಪದ ಮಾಸ್ಟರ್ ದೊಡ್ಡಿ ನಿವಾಸಿ ಬಸವರಾಜು (55) ಸ್ಥಳದಲ್ಲೇ ಸಾವನ್ನಪ್ಪಿದರು.
ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದಾಗ ಚಿಕ್ಕ ಎಲಚಗೆರೆ ಮತ್ತು ಗೊಲ್ಲರಹಳ್ಳಿ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.