ಶನಿವಾರ, ಅಕ್ಟೋಬರ್ 24, 2020
23 °C

ಅಪಘಾತ: ರಸ್ತೆ ದಾಟುತ್ತಿದ್ದ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಶಿವಪುರದಲ್ಲಿ ನಡೆದಿದೆ.

ಭದ್ರಾವತಿ ತರುಣ್ (17) ಮೃತಪಟ್ಟ ಬಾಲಕ. ಬೆಂಗಳೂರಿನಲ್ಲಿ ವಾಸವಿರುವ ಆತ, ತನ್ನ ಚಿಕ್ಕಪ್ಪನ ಅಸ್ತಿಯನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಬಿಟ್ಟು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ. ಮದ್ದೂರಿನ ಶಿವಪುರದಲ್ಲಿ ಟೀ ಕುಡಿಯಲೆಂದು ಕಾರು ನಿಲ್ಲಿಸಿ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ದಾಟುತ್ತಿದ್ದಾಗ ರಾತ್ರಿ 7 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮದ್ದೂರು ಸಂಚಾರ ಠಾಣೆ ಪೊಲೀಸರು ಬೊಲೆರೋ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.