ಶನಿವಾರ, ಡಿಸೆಂಬರ್ 14, 2019
22 °C

ರಸ್ತೆ ಅಪಘಾತ: ಆರು ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ (ಮಂಡ್ಯ): ತಾಲ್ಲೂಕಿನ ದೊಡ್ಡಜಟಕ ಗೇಟ್‌ ಬಳಿ ಚಾಮರಾಜನಗರ– ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಟಾಟಾ ಸುಮೊ ಮತ್ತು ಟೆಂಪೊ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಟೆಂಪೊ ನಾಗಮಂಗಲದ ಸ್ಟಾರ್‌ ಗ್ರೂಪ್‌ ಕಂಪನಿಗೆ ಸೇರಿದೆ. ಟಾಟಾ ಸುಮೊ ಆಲ್ಫನೊ ಎಂಬ ಹಣಕಾಸು ಸಂಸ್ಥೆಗೆ ಸೇರಿದ್ದು, ಅದರ ಸದಸ್ಯರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ನಾಗಮಂಗಲ ಕಡೆಯಿಂದ ಬೆಳ್ಳೂರು ಕ್ರಾಸ್ ಕಡೆಗೆ ಚಲಿಸುತ್ತಿದ್ದ ಟಾಟಾ ಸುಮೊಗೆ ನಾಗಮಂಗಲ ಕಡೆಗೆ ಬರುತ್ತಿದ್ದ ಟೆಂಪೊ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ವೇಗವಾಗಿ ಚಲಿಸುತ್ತಿದ್ದು, ಡಿಕ್ಕಿಯ ರಭಸಕ್ಕೆ ಟಾಟಾ ಸುಮೊ ಅರ್ಧ ಭಾಗ ಛಿದ್ರವಾಗಿದೆ. ಸುಮೋದಲ್ಲಿದ್ದ 7 ಜನರಲ್ಲಿ 4 ಜನ ಸ್ಥಳದಲ್ಲೇ ಅಸುನೀಗಿದ್ದಾರೆ. ಟೆಂಪೊ ಚಾಲಕ ಸೇರಿ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು