ಮದ್ದೂರು: ಬೆಂಗಳೂರು– ಮೈಸೂರು ದಶಪಥ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಅಪರಿಚಿತ ವಾಹನ ಭಾನುವಾರ ನಸುಕಿನಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟರು

ಕೋಲಾರದ ಮಣಿ (25), ಹಿಂಬದಿ ಸವಾರ, ಕೊಪ್ಪಳ ಜಿಲ್ಲೆ, ಲಿಂಗದಮಂಡಿ ಗ್ರಾಮದ ಜನಾರ್ಧನ ಪೂಜಾರಿ (26) ಮೃತರು. ಇವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮೈಸೂರಿಗೆ ಕಡೆಗೆ ಪಲ್ಸರ್ ಬೈಕ್ನಲ್ಲಿ ಬರುವಾಗ ಹಿಂಬದಿಯಿಂದ ಬರುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದರು. ಮದ್ದೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.