ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ನಾಗತಿಹಳ್ಳಿ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಕಾರು ಮುಖಾಮುಖಿ ಡಿಕ್ಕಿಯಾಗಿ ಐವರು ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟವರ ಮಾಹಿತಿ ತಿಳಿದು ಬಂದಿಲ್ಲ, ಇನ್ನೊವಾ ಹಾಗೂ ಸ್ವಿಫ್ಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರ್ ಮೇಲೆ ಬಿದ್ದಿದೆ. ಸ್ವಿಫ್ಟ್ ಕಾರ್‌ನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಇನ್ನೊವಾ ಕಾರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊವಾ ಕಾರ್‌ನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಳೆಯಿಂದ ರಸ್ತೆಯಲ್ಲಿ ನೀರು ನಿಂತಿದ್ದು ವೇಗವಾಗಿ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ಮೃತಪಟ್ಟವರು ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂಡಿಗನವಿಲೆ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.