ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್ ಅಣೆಕಟ್ಟೆ ಪುನರ್ಬಲನಕ್ಕೆ ಕ್ರಮ: ಶಾಸಕ ರಮೇಶ ಬಂಡಿಸಿದ್ದೇಗೌಡ ಅಭಿಮತ

Published 5 ಜನವರಿ 2024, 14:25 IST
Last Updated 5 ಜನವರಿ 2024, 14:25 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣ ಕಾರ್ಯ ಶುರುವಾಗಿ ನೂರು ವರ್ಷಗಳು ತುಂಬಿದ್ದು, ಅಣೆಕಟ್ಟೆಯ ಪುನರ್ಬಲನಕ್ಕೆ ಕ್ರಮ ವಹಿಸಲಾಗಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ತಾಲ್ಲೂಕಿನ ಟಿ.ಎಂ. ಹೊಸೂರು ಗ್ರಾಮದಲ್ಲಿ ಶುಕ್ರವಾರ ನಡೆದ ಜನ ಸಂಪರ್ಕ ಸಭೆ, ಕಂದಾಯ ಅದಾಲತ್ ಮತ್ತು ಇ-ಸ್ವತ್ತು ಆಂದೋಲನ ಉದ್ಘಾಟಿಸಿ ಅವರು‌ ಮಾತನಾಡಿದರು.

‘ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಗೇಟ್‌ಗಳನ್ನು ಬದಲಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುವ ಹೆಚ್ಚುವರಿ ನೀರನ್ನು ಹೊರಗೆ ಬಿಡಲು ಇರುವ ಗೇಟ್ ದುರಸ್ತಿ ಮತ್ತು ಬದಲಾವಣೆ ಕಾರ್ಯವೂ ನಡೆಯುತ್ತಿದೆ. ಜಲಾಶಯದಲ್ಲಿ ತುಂಬಿರುವ ಹೂಳನ್ನು ತೆಗೆಯುವ ಸಂಬಂಧ ತಜ್ಞರ ತಂಡ ರಚಿಸುವಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು.

‘ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಪ್ರತಿ ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ. ಜನರು ಇಂತಹ ಸಭೆಗಳಲ್ಲಿ ಭಾಗವಹಿಸಬೇಕು’ ಎಂದರು.

ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೇಣು ಜನ ಸಂಪರ್ಕ ಸಭೆಯ ಉದ್ದೇಶ ತಿಳಿಸಿದರು.

ಗ್ರಾ.ಪಂ.ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಸಂಜೀವಮ್ಮ, ಮಾಜಿ ಅಧ್ಯಕರಾದ‌ ಬಸವರಾಜು, ಮಹಾಲಕ್ಷ್ಮಿ, ಸದಸ್ಯರಾದ ಶಿವಕುಮಾರ್, ವಸಂತಮ್ಮ, ಪಿಕಾರ್ಡ್ ಬ್ಯಾಂಕ್‌ ಮಾಜಿ ಅಧ್ಯಕ್ಷ ಎಚ್.ಡಿ. ಮಹದೇವು, ಎಪಿಎಂಸಿ ಮಾಜಿ ಅಧ್ಯಕ್ಷ ದೇವರಾಜು, ಕಂದಾಯ ನಿರೀಕ್ಷಕ ಮಂಜುನಾಥ್, ಮುಖಂಡರಾದ ನಟ, ಜಕ್ಕನಹಳ್ಳಿ ಬಾಲಕೃಷ್ಣ, ಗೌಡಹಳ್ಳಿ ಪದ್ಮನಾಭ, ಸಿಪಿಐ ಬಿ.ಜಿ. ಕುಮಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT