ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟ ಮಾತಿನಂತೆ ಕಾಂಗ್ರೆಸ್‌ ಪರ ಪ್ರಚಾರ: ನಟ ದರ್ಶನ್

Published 18 ಏಪ್ರಿಲ್ 2024, 16:25 IST
Last Updated 18 ಏಪ್ರಿಲ್ 2024, 16:25 IST
ಅಕ್ಷರ ಗಾತ್ರ

ಹಲಗೂರು: ‘ನಾನು ಯಾವುದೇ ಪಕ್ಷದ ಬೆಂಬಲಿಗ, ಸದಸ್ಯನಲ್ಲ. ನಾನು ಯಾವಾಗಲೂ ಉತ್ತಮ ಅಭ್ಯರ್ಥಿಯ ಪರ’ ಎಂದು ಸಿನಿಮಾ ನಟ ದರ್ಶನ್ ಹೇಳಿದರು.

ಹಲಗೂರು, ಹುಸ್ಕೂರು ಮತ್ತು ಹಾಡ್ಲಿ-ಮೇಗಳಾಪುರ ವೃತ್ತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಕಳೆದ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಂದಾಗ ‘ಸ್ವಾಭಿಮಾನ ಉಳಿಸಿ’ ಎಂದು ಮತ ಕೋರಿದ್ದೆ. ನನ್ನ ಮಾತಿಗೆ ಬೆಲೆ ನೀಡಿ ಅಭೂತಪೂರ್ವ ಬೆಂಬಲ ನೀಡಿದ ಪರಿಣಾಮ ಸುಮಲತಾ ಅವರಿಗೆ ಗೆಲುವಾಗಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಗೆಲುವಿಗೆ ಶಾಸಕ ನರೇಂದ್ರ ಸ್ವಾಮಿ ಸಹ ಕಾರಣರು. ಅವರ ಋಣ ತೀರಿಸುವ ಸಮಯ ಇಂದು ನನ್ನದಾಗಿದೆ’ ಎಂದು ಕಳೆದ ಬಾರಿಯ ಚುನಾವಣಾ ದಿನಗಳನ್ನು ನೆನಪಿಸಿಕೊಂಡರು.

ಚುನಾವಣೆಯ ಆರಂಭಕ್ಕೂ ಮುನ್ನ ಮದ್ದೂರು ಶಾಸಕ ಕೆ.ಎಂ.ಉದಯ್ ಅವರು ಭೇಟಿ ಮಾಡಿ ಸಂಸದರಾದ ಸುಮಲತಾ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಪರ ಪ್ರಚಾರ ಮಾಡುವಂತೆ ಕೋರಿದ್ದರು. ಆಗಲಿ ಎಂದು ಮಾತು ನೀಡಿದ್ದೆ. ಕೊಟ್ಟ ಮಾತಿನಂತೆ ಇಂದು ಮಳವಳ್ಳಿ ತಾಲ್ಲೂಕಿನ ವಿವಿಧೆಡೆ ಬಹಿರಂಗವಾಗಿ ಪ್ರಚಾರ ಆರಂಭಿಸಿರುವೆ. ಕ್ಷೇತ್ರದ ಎಲ್ಲಾ ಮತದಾರರು ಒಕ್ಕೊರಲಿನಿಂದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಬೆಂಬಲಿಸಿ ಎಂದು ಕರೆ ನೀಡಿದರು.

ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಮಾತನಾಡಿ, ‘ಮಂಡ್ಯ ಕ್ಷೇತ್ರದಲ್ಲಿ ಜನರಿಂದ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ಈ ಬಾರಿ ನಮ್ಮ ಅಭ್ಯರ್ಥಿ ವೆಂಕಟರಮಣೇಗೌಡ ವಿಜಯಮಾಲೆ ಧರಿಸುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಂ.ಉದಯ್, ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಯೂತ್ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT