ಬುಧವಾರ, ಜುಲೈ 28, 2021
23 °C

ಕಾರಿಗೆ ಪೆಟ್ರೋಲ್‌ ಹಾಕಿಸಿಕೊಡದಿದ್ದರೆ ಇಲ್ಲೇ ಕೂರುತ್ತೇನೆ: ವೆಂಕಟ್‌‌ ರಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ನಟ ‘ಹುಚ್ಚ’ ವೆಂಕಟ್‌ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ರಂಪಾಟ ನಡೆಸಿದ್ದಾರೆ.

ಭಾನುವಾರ ಸಂಜೆ ಕಾವೇರಿ ಸಂಗಮ ಬಳಿ ಕಾಣಿಸಿಕೊಂಡ ಅವರು, ‘ಕಾರಿಗೆ ಪೆಟ್ರೋಲ್‌ ಹಾಕಿಸಿಕೊಡಿ, ಅಲ್ಲಿಯವರೆಗೆ ಇಲ್ಲೇ ಠಿಕಾಣಿ ಹೂಡುತ್ತೇನೆ’ ಎಂದು ಪಟ್ಟು ಹಿಡಿದಿದ್ದಾರೆ. ಸ್ಥಳೀಯರು ಪೆಟ್ರೋಲ್‌ ತರಿಸಿಕೊಟ್ಟು, ಹಣವನ್ನೂ ನೀಡಿದ್ದಾರೆ. ರಹಮತ್‌ಉಲ್ಲಾ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಪೊಲೀಸರನ್ನು ಕರೆಸಿ ಕಳುಹಿಸಿದ್ದಾರೆ.

ಸೋಮವಾರ ಮುಂಜಾನೆ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಬಳಿ ಕಾಣಿಸಿಕೊಂಡ ವೆಂಕಟ್‌, ಇಬ್ಬರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಪೊಲೀಸರ ಜತೆ ವಾಗ್ವಾದ ನಡೆಸಿ ಅವರಿಂದಲೂ ಹಣ ಪಡೆದಿದ್ದಾರೆ ಎನ್ನಲಾಗಿದೆ.

ವೆಂಕಟ್‌ ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದೇವೆ ಎಂದು ಎಸ್‌ಐ ಮುದ್ದು ಮಹದೇವು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು