ಸೋಮವಾರ, ಜೂನ್ 21, 2021
29 °C

ಕೋವಿಡ್‌ ದೃಢಪಟ್ಟ ಮಹಿಳೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೋವಿಡ್‌– 19 ದೃಢಪಟ್ಟಿದ್ದ ನಾಗಮಂಗಲ ತಾಲ್ಲೂಕಿನ 40 ವರ್ಷದ ಮಹಿಳೆಯೊಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ನಗರದ ಹೊರವಲಯದ ವಿಶ್ವೇಶ್ವರಯ್ಯ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಮಹಿಳೆ ಆ.5ರಂದು ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವವನ್ನು ಪರೀಕ್ಷೆಗೆ ನೀಡಿದ್ದರು. ಅ.6ರಂದು ಫಲಿತಾಂಶ ಬಂದಿದ್ದು ಪಾಸಿಟಿವ್ ಎಂದು ತಿಳಿದೊಡನೆ ನಾಲೆಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಗೌರಿಶಂಕರ ಕಲ್ಯಾಣಮಂಟಪದ ಸಮೀಪದ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋವಿಡ್ ಕಾರ್ಯಸೂಚಿಯನ್ವಯ ಮೃತದೇಹವನ್ನು ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು