ಮಂಡ್ಯ: ‘ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ನಿಮ್ಮ ಸಮಸ್ಯೆಗಳನ್ನು ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾರೆ’ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ದುದ್ದ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ‘ಸರ್ಕಾರಿ ಸೇವೆ ಮನೆ ಬಾಗಿಲಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದುದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1310ಕ್ಕೂ ಹೆಚ್ಚು ಮನೆಗಳಿವೆ. ಈಗಾಗಲೇ ಅಧಿಕಾರಿಗಳು ದುದ್ದ ಪಂಚಾಯತಿಯ ಶೇ 90ರಷ್ಟು ಮನೆಗಳಿಗೆ ತೆರಳಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಆ್ಯಪ್ನಲ್ಲಿ ನಮೂದಿಸಿದ್ದಾರೆ ಎಂದು ತಿಳಿಸಿದರು.

ಸಮಸ್ಯೆ ಹೊಂದಿರುವ ಸಾರ್ವಜನಿಕರಲ್ಲಿ ಶೇ 80ರಷ್ಟು ಜನರು ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಶೇ 20ರಷ್ಟು ಜನರು ಮಾತ್ರ ಶಾಸಕರ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಿಗೆ ನೀವು ಬರಬೇಡಿ, ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಬರುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ ಮಾತನಾಡಿ, ‘ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಎರಡು ವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಊರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಹಾಗೂ ಅಧಿಕಾರಿಗಳ ಕಚೇರಿಗೆ ಅಲೆದಾಡುವ ತಪ್ಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ನಂತರ ದರ್ಶನ್ ಪುಟ್ಟಣ್ಣಯ್ಯ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚಲುವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಮಂಡ್ಯ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ.ಉದಯ್ ಕುಮಾರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಲೋಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗೆಗೌಡ ಇದ್ದರು.

‘ಸ್ಮಶಾನ ಕಲ್ಪಿಸಲು ಕ್ರಮ’

‘ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ನಮ್ಮ ಗ್ರಾಮಗಳಲ್ಲಿ ಸ್ಮಶಾನ ಇಲ್ಲವೆಂದು ಜನ ಹೇಳುತ್ತಾರೆ. ನಿಮ್ಮ ಗ್ರಾಮಗಳಲ್ಲಿ ಸ್ಮಶಾನ ಇಲ್ಲವಾದರೆ ಆರ್.ಟಿ.ಸಿ ಯಲ್ಲಿರುವ ಸರ್ಕಾರಿ ಜಾಗಗಳನ್ನು ಪರೀಶೀಲನೆ ನಡೆಸಲಾಗುವುದು. ಒಂದು ವೇಳೆ ಯಾರಾದರೂ ಸ್ಮಶಾನ ಒತ್ತುವರಿ ಮಾಡಿದ್ದಾರೆ ಒತ್ತುವರಿ ತೆರವುಗೊಳಿಸಲಾಗುವುದು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ ನೀಡಿದರು. ಅಧಿಕಾರಿಗಳು ರೈತರ ಬಳಿ ಹೋಗಿ ಬೆಳೆ ಪದ್ಧತಿ ಬದಲಾವಣೆಯಿಂದ ಉಂಟಾಗುವ ಆದಾಯ ಹೆಚ್ಚಳ ಕುರಿತು ಮಾಹಿತಿ ನೀಡಬೇಕು. ಹೆಚ್ಚಾಗಿ ಗದ್ದೆಗಳಿಗೆ ಹೋಗಲು ದಾರಿ ಇಲ್ಲವೆಂದು ರೈತರು ತಿಳಿಸಿದ್ದಾರೆ. ನಕ್ಷೆಯಲ್ಲಿ ದಾರಿ ಇದ್ದು ಒತ್ತುವರಿ ಮಾಡಿದ್ದಾರೆ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.