ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಕಲೆಯ ಆಸ್ವಾದನೆ; ಆರೋಗ್ಯ ವೃದ್ಧಿ

ಭರತನಾಟ್ಯ ‘ಮಾರ್ಗಿ ಉತ್ಸವ’ ಉದ್ಘಾಟಿಸಿದ ಡಾ. ಸತ್ಯನಾರಾಯಣರಾವ್
Last Updated 4 ಅಕ್ಟೋಬರ್ 2021, 5:24 IST
ಅಕ್ಷರ ಗಾತ್ರ

ಮಂಡ್ಯ:ಕಲಾ ಪ್ರಕಾರದ ಯಾವುದೇ ಪ್ರದರ್ಶನಗಳಲ್ಲಿ ಭಾಗವಹಿಸು ವಿಕೆಯಿಂದ ಮನುಷ್ಯನ ಆರೋಗ್ಯ ವೃದ್ಧಿಸುತ್ತದೆ ಎಂದುಮಾನಸಿಕ ಹಾಗೂ ಲೈಂಗಿಕ ರೋಗ ಚಿಕಿತ್ಸಾ ತಜ್ಞ ಡಾ.ಟಿ.ಎಸ್.ಸತ್ಯನಾರಾಯಣರಾವ್ ಸಲಹೆ ನೀಡಿದರು.

ನಗರದ ಪಿಇಎಸ್‌ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಗುರುದೇವ ಅಕಾಡೆಮಿ ಆಫ್‌ ಫೈನ್‌ ಆರ್ಟ್ಸ್‌ ಸಹಯೋಗದಲ್ಲಿ ಗುರುದೇವ ಲಲಿತಕಲಾ ಅಕಾಡೆಮಿಯ ರಜತ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಭರತನಾಟ್ಯ ‘ಮಾರ್ಗಿ ಉತ್ಸವ-2021’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಾಯಾಮ, ಪೌಷ್ಟಿಕ ಆಹಾರ, ನಗು-ಸಂತೋಷ, ಕಲೆ ಹಾಗೂ ಸಾಮಾಜಿಕ ಕಾರ್ಯಗಳಿಂದ ಮನಸ್ಸು ಆಹ್ಲಾದಗೊಳ್ಳುತ್ತದೆ.ದೇಹದ ರೋಗನಿ ರೋಧಕ ಶಕ್ತಿ ಹೆಚ್ಚಾಗಬೇ ಕಾದರೆ ಇಂಥ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಇಂಥ ಕಾರ್ಯ ಕ್ರಮಗಳಿಂದಮಕ್ಕಳ ಪ್ರತಿಭೆ ಹೊರ ಹೊಮ್ಮಲು ಸಹಕಾರಿ ಆಗುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್‌.ಉದಯಕುಮಾರ್ ಮಾತನಾಡಿ, ಗುರುದೇವ ಲಲಿತಕಲಾ ಅಕಾಡೆಮಿಯ ಹಲವು ಪ್ರತಿಭೆಗಳನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದ್ದಾರೆ ಎಂದರು.

ಲಯನ್‌ ಜಿಲ್ಲಾ ರಾಜ್ಯಪಾಲರ ಸಂಯೋಜನೆ ಅಧಿಕಾರಿ ಬಿ.ಎಂ.ಅಪ್ಪಾಜಪ್ಪ ಮಾತನಾಡಿ, ಹೆಣ್ಣುಮಕ್ಕಳು ಸಾಹಿತ್ಯ ಸಂಗೀತ ನೃತ್ಯ ಕಲೆಯಲ್ಲಿ ಅಪಾರ ಪ್ರತಿಭೆ ಹೊಂದಿದ್ದು, ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಅಕಾಡೆಮಿ ಕಲಾ ಪೋಷಕರಾದ ಡಾ.ಬಿ.ಎಸ್.ಕಕ್ಕಿಲ್ಲಾಯ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಡಾ.ಪ್ರದೀಪ್‌ ಕುಮಾರ ಹೆಬ್ರಿ,ಸಂಸ್ಥೆಯ ನಿರ್ದೇಶಕಿ ಡಾ.ಚೇತನಾ ರಾಧಾಕೃಷ್ಣ ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT