ಮಳವಳ್ಳಿ: ಸಂಕಷ್ಟದ ಪರಿಸ್ಥಿತಿಯಲ್ಲಿ ಇರುವ ಕಲಾವಿದರ ಮಾಶಾಸನವನ್ನು ₹3 ಸಾವಿರಕ್ಕೆ ಹೆಚ್ಚಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರವನ್ನು ಡಾ.ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ಸ್ವಾಗತಿಸಿದ್ದಾರೆ.
‘ರಾಜ್ಯದಲ್ಲಿ ಇರುವ ಬಹುತೇಕ ಕಲಾವಿದರು ನಮ್ಮ ಕುಟುಂಬದ ನಿರ್ವಹಣೆಗೆ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಾವಿದರಿಗೆ ನಾಗರಿಕ ಸೌಲಭ್ಯಗಳನ್ನು ಒದಗಿಸಿಕೊಡಲು ಮುಂದಾಗಲಿ’ ಎಂದು ಮನವಿ ಮಾಡಿದ್ದಾರೆ.