ಆತ, ಮಂಡ್ಯದಿಂದ ಮಳವಳ್ಳಿ ಕಡೆಗೆ ಬೈಕ್‌ನಲ್ಲಿ ಬರುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಚಿಕ್ಕಮುಲಗೂಡು ಮತ್ತು ಹನಿಯಂಬಾಡಿ ಮಾರ್ಗ ಮಧ್ಯೆ ಅಡ್ಡಗಟ್ಟಿದ್ದಾರೆ. ಆರೋಪಿ ಮುಖ್ಯ ರಸ್ತೆಯಿಂದ ಜಮೀನುಗಳಿಗೆ ಸಂಪರ್ಕಿಸುವ ಕಚ್ಚಾ ರಸ್ತೆಯಲ್ಲಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಬೆನ್ನತ್ತಿದ ಪೊಲೀಸರು ಸುತ್ತುವರಿದಾಗ ಕಾನ್‌ಸ್ಟೆಬಲ್ ಸಿದ್ದರಾಜು ಅವರಿಗೆ ಮಾರಕಾಸ್ತ್ರಗಳಿಂದ ಬಲಗೈಗೆ ಗಾಯಪಡಿಸಿದ್ದಾನೆ. ಆಗ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆಗಲೂ ಪರಾರಿಯಾಗಲು ಯತ್ನಿಸಿದ ಮುತ್ತುರಾಜ್ ಮೇಲೆ ಸಿಪಿಐ ಬಿ.ಎಸ್.ಶ್ರೀಧರ್ ಗುಂಡಿನ ದಾಳಿ ನಡೆಸಿದ್ದಾರೆ. ಬಲಗಾಲಿನ ಮಂಡಿಗೆ ಗುಂಡು ಹೊಕ್ಕಿದ್ದು, ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.