ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜು ಅಡ್ಡೆಯ ಮೇಲೆ ದಾಳಿ: 12 ಜನರ ಬಂಧನ

Published 17 ಮೇ 2024, 14:48 IST
Last Updated 17 ಮೇ 2024, 14:48 IST
ಅಕ್ಷರ ಗಾತ್ರ

ಮಳವಳ್ಳಿ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊರೇಗಾಲ ಮತ್ತು ನೆಲ್ಲೂರು ಗ್ರಾಮಗಳಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಕೊರೇಗಾಲ ಮತ್ತು ನೆಲ್ಲೂರು ಗ್ರಾಮಗಳ ಹೊರವಲಯದಲ್ಲಿ ಜೂಜು ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಸಿಪಿಐ ಬಿ‌.ಜಿ.ಮಹೇಶ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಕೊರೇಗಾಲದಲ್ಲಿ ಐವರನ್ನು ಬಂಧಿಸಿ ಐದು ಬೈಕ್, ₹6,200 ವಶಕ್ಕೆ ಪಡೆದುಕೊಂಡಿದ್ದಾರೆ.

ನೆಲ್ಲೂರು ಗ್ರಾಮದಲ್ಲಿ ಏಳು ಮಂದಿಯನ್ನು ಬಂಧಿಸಿದ್ದು, ಐದು ಬೈಕ್ ಮತ್ತು ನಾಲ್ಕು ಮೊಬೈಲ್, ₹7500 ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಹಲವು ಸಿಬ್ಬಂದಿ ಭಾಗಿಯಾಗಿದ್ದರು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT