ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿ. ರವಿಕುಮಾರ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಆಯ್ಕೆ ನಡೆಯಿತು. ತಾಲ್ಲೂಕು ಪಂಚಾಯಿತಿ ಇಒ ಎ.ಬಿ. ವೇಣು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

‘ಬೆಳಗೊಳ ಗ್ರಾಮದಲ್ಲಿ ವಸತಿ ರಹಿತರು ಮನೆ ಕಟ್ಟಿಕೊಳ್ಳಲು ನಿವೇಶನ ಮಂಜೂರು ಮಾಡಿ ಹಕ್ಕು ಪತ್ರ ವಿತರಿಸಲು ಕ್ರಮ ವಹಿಸಲಾಗುವುದು. ಈ ಸಂಬಂಧ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರ ಜತೆ ಈಗಾಗಲೇ ಚರ್ಚಿಸಲಾಗಿದೆ. ಮೂರು ತಿಂಗಳ ಒಳಗೆ ಅರ್ಹರಿಗೆ ನಿವೇಶನ ಹಕ್ಕುಪತ್ರ ನೀಡಲಾಗುತ್ತದೆ. ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ’ ಎಂದು ಬಿ. ರವಿಕುಮಾರ್ ತಿಳಿಸಿದರು.

ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಸದಸ್ಯರಾದ ಬಿ.ವಿ. ಸುರೇಶ್, ಪುಟ್ಟರಾಜು, ಅರವಿಂದ, ರಜಿನಿ, ನಂಜಶೆಟ್ಟಿ, ರಾಧಾ, ಪ್ರಭಾ, ಅಶ್ವಿನಿ, ಸವಿತಾ, ವೆಂಕಟಲಕ್ಷ್ಮಿ, ಲಕ್ಷ್ಮಮ್ಮ, ರವಿಕುಮಾರ್, ಆರ್ಮುಗಂ, ಶಿವಕುಮಾರ್, ಪಲ್ಲವಿ, ಪಿಡಿಒ ರವಿ, ಕಾರ್ಯದರ್ಶಿ ವೆಂಕಟರಾಮು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.