ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀರಂಗಪಟ್ಟಣ: ಪಶ್ಚಿಮವಾಹಿನಿಯಲ್ಲಿ ಹರ್ಷನ ಅಸ್ಥಿ ವಿಸರ್ಜನೆ

Last Updated 24 ಫೆಬ್ರುವರಿ 2022, 10:04 IST
ಅಕ್ಷರ ಗಾತ್ರ

ಮಂಡ್ಯ: ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಅಸ್ಥಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿಯಲ್ಲಿ ನೆರವೇರಿತು.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿ ಪೂಜಾ ಕೈಂಕರ್ಯ ನೆರವೇರಿಸಿದರು.

ಅರ್ಚಕ ಸಂದೀಪ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಧರುಮತಿ ನಾರಾಯಣ ಹೋಮ, ಅಸ್ಥಿ ಸಂಚಯನ, ದಶದಾನ ಸೇರಿ ಹಲವು ವಿಧಿವಿಧಾನ ನಡೆಸಲಾಯಿತು.

ನೂರಾರು ಸಂಖ್ಯೆಯ ಶ್ರೀರಾಮಸೇನೆ, ಭಜರಂಗದಳದ ಕಾರ್ಯಕರ್ತರು ಸೇರಿದ್ದರು. 'ಜೈಶ್ರೀರಾಮ್, ಹರ್ಷ ಅಮರ್ ರಹೇ ಘೋಷಣೆ' ಘೊಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT