ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bangla Unrest: ಹಿಂದೂಗಳ ರಕ್ಷಣೆಗೆ ವಕೀಲರ ಆಗ್ರಹ

Published : 17 ಆಗಸ್ಟ್ 2024, 13:40 IST
Last Updated : 17 ಆಗಸ್ಟ್ 2024, 13:40 IST
ಫಾಲೋ ಮಾಡಿ
Comments

ಮಂಡ್ಯ: ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ, ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ವಕೀಲರ ಸಂಘದ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ವಕೀಲರ ಸಂಘದ ಎದುರು ಜಮಾಯಿಸಿದ ಸದಸ್ಯರು, ನ್ಯಾಯಾಲಯದ ಕಲಾಪದಿಂದ ಹೊರಗುಳಿದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದರು. ನಂತರ ಜೆ.ಸಿ.ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಜಿಲ್ಲಾಧಿಕಾರಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಾಂಗ್ಲಾ ದೇಶದಲ್ಲಿ ಹಿಂದೂಗಳು ಮತ್ತು ಅಲ್ಲಿನ ಅಲ್ಪಾಸಂಖ್ಯಾತರರ ಮೇಲೆ ದೌರ್ಜನ್ಯ ನಡೆಸುವ ಮೂಲಕ ಕಾನೂನು ವಿರೋಧಿ ಚಟುವಟಿಕೆ ಹೆಚ್ಚಾಗಿರುವುದು ಆತಂಕಕಾರಿ ವಿಷಯವಾಗಿದೆ. ದೌರ್ಜನ್ಯ ಹೆಚ್ಚಳದಿಂದ ಪ್ರಾಣ ಹಾನಿಯೂ ಸಂಭವಿಸಿದೆ. ಇಂತಹ ಅಮಾನುಷ ದೌರ್ಜನ್ಯ ತಡೆಯಲು ಅಲ್ಲಿನ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು. ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತವಾಗಿದೆ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ದೇಶದ ವಿವಿದೆಡೆ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದಕ್ಕೆ ಕಡಿವಾಣ ಹಾಕಬೇಕು ಎಂದು ವಕೀಲರಾದ ಮಹೇಂದ್ರ, ಸತೀಶ್‌ ಮಂಗಲ, ಮಹೇಶ್‌, ಅನಿಲ್‌ ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಟಿ. ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಡಿ.ಎಂ. ಮಹೇಶ್, ಸಂಘದ ಶೋಭಾ, ಜಿ.ಬಿ.ಬಸವರಾಜು, ಮರಿಗೌಡ, ತಿರುಮಲಸ್ವಾಮಿ, ನಂದೀಶ್, ಎಂ.ರೂಪ, ರೇವಣ್ಣ, ಅರುಣ್‌ಕುಮಾರ್‌, ಕೀರ್ತಿ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT