ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್ ಖಾತೆ ಸ್ಥಗಿತ | ಬಿಜೆಪಿಯಿಂದ ದ್ವೇಷದ ರಾಜಕೀಯ: ಕೆ.ಜೆ.ದೇವರಾಜು

Published 22 ಮಾರ್ಚ್ 2024, 13:54 IST
Last Updated 22 ಮಾರ್ಚ್ 2024, 13:54 IST
ಅಕ್ಷರ ಗಾತ್ರ

ಮಳವಳ್ಳಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಚಿಕ್ಕಲಿಂಗಯ್ಯ, ಸದಸ್ಯರಾದ ಅಮೃತ್ ಕಂಠೇಶ್ ಹಾಗೂ ಸಾಧಿಕ್ ಪಾಷಾ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಅಭಿನಂದಿಸಲಾಯಿತು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ ಅಭಿನಂದನೆ ಸ್ವೀಕರಿಸಿ ಮಾತನಾಡಿ, ‘ನನ್ನ ಮೇಲೆ ನಂಬಿಕೆ ಇಟ್ಟು ಇಂಥ ದೊಡ್ಡ ಜವಾಬ್ದಾರಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಆಶಯದಂತೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವಂತೆ ಕರ್ತವ್ಯ ನಿರ್ವಹಿಸಲಾಗುವುದು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಹೇಳಿದರು.

‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಇರುವ ಸಣ್ಣ ಪುಟ್ಟ ಲೋಪದೋಷಗಳ ಸರಿಪಡಿಸುವ ಕಾರ್ಯಕ್ಕೆ ಶೀಘ್ರದಲ್ಲಿಯೇ ಮುಂದಾಗಿ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು’ ಎಂದರು.

ಸದಸ್ಯರಾದ ಅಮೃತ್ ಕಂಠೇಶ್ ಹಾಗೂ ಸಾಧಿಕ್ ಪಾಷಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು ಮಾತನಾಡಿದರು.

ಬಿಜೆಪಿ ವಿರುದ್ಧ ವಾಗ್ದಾಳಿ: ‘ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಇಂಥ ಘಟನೆಗಳು ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತವೆ. ಕೂಡಲೇ ಸ್ಥಗಿತಗೊಂಡಿರುವ ಬ್ಯಾಂಕ್ ಖಾತೆಗಳ ಬಳಕೆಗೆ ಅವಕಾಶ ನೀಡಬೇಕು. ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು ಕಿಡಿ ಕಾರಿದರು.

ಕಾರ್ಯಾಧ್ಯಕ್ಷರಾದ ಎಂ.ಬಿ.ಮಲ್ಲಯ್ಯ, ಶಿವಮಾದೇಗೌಡ, ಯುವ ಘಟಕದ ಅಧ್ಯಕ್ಷರಾದ ಎಚ್.ಕೆ.ಕೃಷ್ಣಮೂರ್ತಿ, ಎಂ.ಶಿವಮೂರ್ತಿ, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಪ್ರಸನ್ನ, ಮುಖಂಡರಾದ ಆರ್.ಎನ್.ವಿಶ್ವಾಸ್, ಬಿ.ಆರ್.ರಾಮಚಂದ್ರು, ಸಿ.ಮಾಧು, ಸುಷ್ಮಾ ರಾಜು, ಸಿ.ಪಿ.ರಾಜು, ವೆಂಕಟೇಗೌಡ, ಕುಂದೂರು ಪ್ರಕಾಶ್, ಸಾಗ್ಯ ಕೆಂಪಣ್ಣ, ಪ್ರಭು, ದಶರಥ, ಡಿ.ಪ್ರಕಾಶ್, ಕಿರಣ್ ಶಂಕರ್, ಬಂಕ್ ಮಹದೇವು, ನಾಗರಾಜು, ಶಾಂತರಾಜು, ಬಸವರಾಜು, ರವೀಂದ್ರ, ಸಂತೋಷ್, ಅಖಿಲ್, ಅನಿಲ್ ಕುಮಾರ್, ರಮೇಶ್, ಶಿವರಾಜ್ ನಾಯಕ್, ಚೇತನ್ ನಾಯಕ್, ಚಿಕ್ಕಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT