ಮದ್ದೂರು: ಬಸವಣ್ಣ 12ನೇ ಶತಮಾನದಲ್ಲಿ ಜಾತಿ, ಮತ, ಲಿಂಗ ಭೇದವನ್ನು ತಿರಸ್ಕರಿಸುವ ಮೂಲಕ ಸಾಮಾಜಿಕ ಕ್ರಾಂತಿಗೆ ಕಾರಣರಾದರಲ್ಲದೇ ಹಲವು ವಚನ ಸಾಹಿತ್ಯವನ್ನು ರಚಿಸಿ ಸಾಮಾಜಿಕ ಅಭಿವೃದ್ಧಿಗೆ ಮುನ್ನುಡಿ ಬರೆದ ಕಾಯಕಯೋಗಿ ಎಂದು ಬೇಬಿಬೆಟ್ಟದ ರಾಮಯೋಗೇಶ್ವರ ಮಠದ ಶಿವಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.

ವೀರಶೈವ ಅಭಿವೃದ್ಧಿ ಸಂಸ್ಥೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘ ಮತ್ತು ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಬಸವೇಶ್ವರ ಜಯಂತ್ಯುತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಬೆಳೆದಂತೆ ಆಚಾರ-ವಿಚಾರಗಳು ಕಣ್ಮರೆಯಾಗುತ್ತಿದ್ದು, ಮಕ್ಕಳಿಗೆ ಆಚಾರ-ವಿಚಾರ, ಸಂಸ್ಕೃತಿಯನ್ನು ಕಲಿಸುವ ನಿಟ್ಟಿನಲ್ಲಿ ಪಾಲಕರು ಮುಂದಾಗಬೇಕು. ವಿಭೂತಿ ಧರಿಸುವುದರಿಂದ ಕೆಟ್ಟ ಆಲೋಚನೆಗಳು ಕಣ್ಮರೆಯಾಗಿ ಒಳ್ಳೆಯ ಆಲೋಚನೆಗಳು ಬರುತ್ತವೆ’ ಎಂದು ಹೇಳಿದರು.

ತಾಲ್ಲೂಕಿನ ಮಡೇನಹಳ್ಳಿ ತೋಟದಾರ್ಯ ಮಠದ ಅರುಣಾಚಲ ಸ್ವಾಮೀಜಿ, ಎಸ್.ಐ.ಹೊನ್ನಲಗೆರೆ ರೇಣುಕಾಶ್ರಮ ಮಠದ ಶಿವಲಿಂಗಶಿವಾಚಾರ್ಯ ಸ್ವಾಮೀಜಿ ಶರಣರನ್ನು ಕುರಿತು ಮಾತನಾಡಿದರು.

ವೈದ್ಯನಾಥಪುರದ ಕದಂಬ ಜಂಗಮ ಮಠದ ಪೀಠಾಧ್ಯಕ್ಷ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದವರನ್ನು ಗೌರವಿಸಲಾಯಿತು. ವಿಧಾನ ಪರಿಷತ್ ಸದಸ್ಯ ಮಧು.ಜಿ. ಮಾದೇಗೌಡ, ಪುರಸಭೆ ಅಧ್ಯಕ್ಷೆ ಕೋಕಿಲಾ, ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ, ನಿರ್ದೇಶಕರಾದ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಉದ್ಯಮಿ ಎಂ.ಆರ್. ಉಮಾಪತಿ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಆರ್.ನಾಗಭೂಷಣ್, ವೀರಶೈವ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಆನಂದ್, ವೀರಶೈವ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಮಹೇಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸಿ.ಜಿ. ಗೌರಿಶಂಕರ್, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಪಿ.ಸ್ವಾಮಿ ಪಾಲ್ಗೊಂಡಿದ್ದರು.

ಸಾಂಸ್ಕೃತಿ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಪೇಟೆ ಬೀದಿ ಮೂಲಕ ಬಸವಣ್ಣನವರ ಭಾವಚಿತ್ರವನ್ನು ಸಾಂಸ್ಕೃತಿ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.